ಶೈಕ್ಷಣಿಕ ಅಭಿವೃದ್ಧಿಗೆ ವರದಿ ನೀಡಲು ಡಿಡಿಪಿಐ, ಬಿಇಒಗಳಿಗೆ ಕಿಮ್ಮನೆ ಸೂಚನೆ
ಬೆಂಗಳೂರು: ಕ್ಷಣ ಇಲಾಖೆಯನ್ನು ಸ್ಥಳೀಯ ಮಟ್ಟದಿಂದ ಅಭಿವೃದ್ಧಿಪಡಿಸಲು ಒಂದು ತಿಂಗಳೊಳಗೆ ವರದಿ ನೀಡಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ರಾಜ್ಯ ಸಚಿವ ಕಿಮ್ಮನೆ ರತ್ನಾಕರ ಅವರು ಎಲ್ಲ ಬಿಇಒ ಹಾಗೂ ಡಿಡಿಪಿಐಗಳಿಗೆ ಸೂಚಿಸಿದ್ದಾರೆ.
ಸರ್ಕಾರಿ ಆದೇಶಗಳನ್ನು ಯಾವ ರೀತಿಯಲ್ಲಿ ಅನುಷ್ಠಾನ ಮಾಡಬೇಕು. ಶಿಕ್ಷಣ ವ್ಯವಸ್ಥೆಯ ಸಂಪೂರ್ಣ ಬದಲಾವಣೆ ಹೇಗೆ ಸಾಧ್ಯ? ಶಾಲೆಯಲ್ಲಿನ ನ್ಯೂನತೆಗಳು ಹಾಗೂ ಅಧಿಕಾರಿಗಳು ಮತ್ತು ಶಾಲೆಯ ನಡುವಿನ ಸಂಬಂಧ ಸೇರಿದಂತೆ ಇತರ ವಿಚಾರಗಳ ಬಗ್ಗೆ ಸಮಗ್ರ ವರದಿ ರೂಪಿಸಿ ಶಿಕ್ಷಣ ಇಲಾಖೆ ಹಾಗೂ ತಮಗೆ ವರದಿ ನೀಡುವಂತೆ ಅವರು ನಗರದಲ್ಲಿ ಮಂಗಳವಾರ ನಡೆದ ಶಿಕ್ಷಣ ಕಾರ್ಯಾಗಾರದಲ್ಲಿ ಆದೇಶಿಸಿದರು.
ಕೇಂದ್ರ ಕಚೇರಿಗಳಲ್ಲಿ ಮಾತ್ರ ಬದಲಾವಣೆ ಮಾಡುವುದರಿಂದ ವ್ಯವಸ್ಥೆ ಸುಧಾರಿಸುವುದಿಲ್ಲ. ಶಾಲೆ, ಕ್ಲಸ್ಟರ್ ಹಾಗೂ ತಾಲೂಕಾ ಮಟ್ಟದಲ್ಲಿ ಬದಲಾವಣೆ ತರಬೇಕಿದೆ. ಇದಕ್ಕಾಗಿ ಸ್ಥಳೀಯ ಅಧಿಕಾರಿಗಳು ವರದಿ ನೀಡಬೇಕು. ರಾಜ್ಯ ಸರ್ಕಾರವು ಇದನ್ನು ಗಂಭೀರವಾಗಿ ಪರಿಗಣಿಸಿ ವ್ಯವಸ್ಥೆಯ ಸುಧಾರಣೆಗೆ ಶ್ರಮಿಸಲಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮೊಹಮ್ಮದ್ ಮೋಸಿನ್ ಹಾಗೂ ಎಲ್ಲ ಜಿಲ್ಲೆಗಳ ಡಿಡಿಪಿಐ, ಬಿಇಒಗಳು ಉಪಸ್ಥಿತರಿದ್ದರು.
ಆರ್ಟಿಇ ಅರ್ಜಿ ವಿತರಣೆ ಆರಂಭ
ರಾಜ್ಯಾದ್ಯಂತ ಮಂಗಳವಾರದಿಂದ ಶಿಕ್ಷಣ ಹಕ್ಕು ಕಾಯಿದೆಯ ಮೀಸಲು ಸೀಟುಗಳಿಗೆ ಅರ್ಜಿ ವಿತರಿಸಲು ಆರಂಭಿಸಲಾಗಿದೆ. ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ದೊರೆಯುತ್ತಿದೆ. ಪ್ರಸಕ್ತ ಸಾಲಿನಲ್ಲಿ 1.08 ಲಕ್ಷ ಸೀಟುಗಳು ಕಾಯಿದೆ ವ್ಯಾಪ್ತಿಯಲ್ಲಿ ಮೀಸಲು ಸೀಟುಗಳಾಗಿ ದೊರೆಯುತ್ತಿವೆ. ಇದರಲ್ಲಿ 30 ಸಾವಿರ ಸೀಟುಗಳು ಪೂರ್ವ ಪ್ರಾಥಮಿಕ ತರಗತಿಗೆ ಸೇರಿವೆ ಎಂದು ಇಲಾಖೆ ಮೂಲಗನು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

