ಪ್ರಧಾನ ಸುದ್ದಿ

ಆರೋಪದಲ್ಲಿ ಹುರುಳಿಲ್ಲ

Published On :

ನವದೆಹಲಿ: ತಮ್ಮ ವಿರುದ್ಧ ಮಾಡಲಾದ ಲೈಂಗಿಕ ಕಿರುಕುಳ ಆರೋಪದಲ್ಲಿ ಹುರುಳಿಲ್ಲ. ಅದೊಂದು ಸಂಚಲ್ಲದೆ ಬೇರೇನೂ ಅಲ್ಲ ಎಂದು ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸ್ವತಂತ್ರ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಲೈಂಗಿಕ ಕಿರುಕುಳದ ಆರೋಪ ಮಾಡಿರುವ ಯುವ ವಕೀಲೆ ಹೆಸರೇ ನೆನಪಿಗೆ ಬರುತ್ತಿಲ್ಲ. ನನ್ನ ಇಂಟರ್ನಿಯಾಗಿದ್ದರೆ ಕನಿಷ್ಠ ಹೆಸರಾದರೂ ನೆನಪಿಗೆ ಬರಬೇಕಿತ್ತು ಎಂದಿದ್ದಾರೆ ನ್ಯಾ. ಸ್ವತಂತ್ರ ಕುಮಾರ್. ಇದೇ ವೇಳೆ, ಯುವ ವಕೀಲೆ ಸಲ್ಲಿಸಿರುವ ಅಫಿಡವಿಟ್ ಕುರಿತೂ ತಮಗೆ ಮಾಹಿತಿ ಇಲ್ಲ. ಈ ಕುರಿತು ಮಾಧ್ಯಮಗಳಿಂದಷ್ಟೇ ಕೇಳಿ ತಿಳಿದುಕೊಂಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಈ ನಡುವೆ, ಕೇಂದ್ರ ಸಚಿವರಾದ ವೀರಪ್ಪ ಮೊಯ್ಲಿ ಕೂಡ ಇದೊಂದು ಗಂಭೀರ ಆರೋಪ ಎಂದಿದ್ದಾರೆ. ಆದರೆ, ಈ ಕುರಿತು ತನಿಖೆ ನಡೆಸಬೇಕೇ ಬೇಡವೇ ಎನ್ನುವುದು ಸುಪ್ರೀಂಕೋರ್ಟ್ ತೀರ್ಮಾನಕ್ಕೆ ಬಿಟ್ಟ ವಿಚಾರ ಎಂದಿದ್ದಾರೆ ಮೊಯ್ಲಿ.
ಏತನ್ಮಧ್ಯೆ, ಹೆಚ್ಚುವರಿ ಸಾಲಿಸಿಟರ್ ಜನರಲ್ ಇಂದಿರಾ ಜೈಸಿಂಗ್ ಅವರಿಂದಲೂ ಯುವ ವಕೀಲೆಗೆ ಬೆಂಬಲ ವ್ಯಕ್ತವಾಗಿದೆ. ನ್ಯಾಯಮೂರ್ತಿಗಳ ವಿರುದ್ಧದ ಆರೋಪಗಳ ತನಿಖೆಗೂ ವ್ಯವಸ್ಥೆಯೊಂದರ ಅವಶ್ಯಕತೆ ಇದೆ ಎಂದು ಜೈಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.