ಪ್ರಧಾನ ಸುದ್ದಿ

ನಿತ್ಯಾ ಒತ್ತುವರಿಗೆ ತಕ್ಕ ಶಾಸ್ತಿ, ಸರ್ಕಾರದಿಂದ ಹೊರಬಿದ್ದಿದೆ ಸೂಚನೆ

ನಿತ್ಯಾ ಒತ್ತುವರಿಗೆ ತಕ್ಕ ಶಾಸ್ತಿ, ಸರ್ಕಾರದಿಂದ ಹೊರಬಿದ್ದಿದೆ ಸೂಚನೆ
Published On :

ಮೈಸೂರು: ಬಿಡದಿ ಆಶ್ರಮದಲ್ಲಿ ನಿತ್ಯಾನಂದನ ಭೂ ಒತ್ತುವರಿ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು. ಈಗಾಗಲೇ ಈ ಕುರಿತು ಕಂದಾಯ ಸಚಿವ ಶ್ರೀನಿವಾಸ್‌ಪ್ರಸಾದ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಡದಿಯಲ್ಲಿ ಭೂ ಪರಿವರ್ತನೆ ಮಾಡದೆ ಅಕ್ರಮವಾಗಿ ಕಟ್ಟಡ ನಿರ್ಮಿಸಿ, ಆಶ್ರಮದಲ್ಲಿ ಚಟುವಟಿಕೆಗಳನ್ನು ನಡೆಸುತ್ತಿರುವ ಬಗ್ಗೆ ಪರಿಶೀಲಿಸಲಾಗುವುದು. ಕಂದಾಯ ಸಚಿವರು ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ ಬಳಿಕ ಅವರೊಂದಿಗೆ ಚರ್ಚಿಸಿ ಮುಲಾಜಿಲ್ಲದೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಅಹಿಂದ ಸಮಾವೇಶ ನಡೆಸುತ್ತಿರುವ ಬಗ್ಗೆ ಕಾಂಗ್ರೆಸ್‌ನಲ್ಲಿ ಅಪಸ್ವರ ಕೇಳಿಬಂದಿದೆ. ಹಿರಿಯ ನಾಯಕ ಎಂ.ವಿ. ರಾಜಶೇಖರನ್ ಮೊದಲಾದವರು ಹೈಕಮಾಂಡ್ ಗಮನ ಸೆಳೆದಿದ್ದಾರೆ ಎಂಬುದು ಮಾಧ್ಯಮಗಳ ಸೃಷ್ಟಿ. ಜಾತಿ ಸಮ್ಮೇಳನ ನಡೆಸುವುದು ತಮ್ಮ ಹಕ್ಕು ಪ್ರತಿಪಾದನೆಗಾಗಿ ಎಂದರು.

ದಾಖಲೆ ಇದ್ದರೆ ಕೋರ್ಟಿಗೆ ಹೋಗ್ಲಿ
ಸಮಾಜ ಪರಿವರ್ತನಾ ಸಮುದಾಯದ ಸಂಚಾಲಕ ಎಸ್.ಆರ್. ಹಿರೇಮಠ ಅವರ ಬಳಿ ದಾಖಲೆ ಇದ್ದರೆ ಕೋರ್ಟಿಗೆ ಹೋಗಲಿ. ಶಿವಕುಮಾರ್ ವಿರುದ್ಧದ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಬೇಗ್ ವಿರುದ್ಧ ಇರುವುದು ಖಾಸಗಿ ದೂರು. ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ. ಈ ನೆಲದ ಕಾನೂನಿಗೆ ಎಲ್ಲರೂ ತಲೆಬಾಗಲೇಬೇಕು ಎಂದು ಸಿಎಂ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.