ಪ್ರತಿಭಟನೆ ವೇಳೆ ವಿಷ ಸೇವನೆ
ಕ.ಪ್ರ.ವಾರ್ತೆ ಬೆಂಗಳೂರು ಜ.27
ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಸೋಮವಾರ ಪ್ರಾರಂಭಿಸಿದ ಅನಿರ್ಧಿಷ್ಟ ಅವಧಿಯ ಪ್ರತಿಭಟನೆ ಮೊದಲ ದಿನವೇ ತೀವ್ರ ಸ್ವರೂಪ ಪಡೆದುಕೊಂಡು ಉಪನ್ಯಾಸಕರೊಬ್ಬರು ವಿಷ ಸೇವಿಸಿದ ಘಟನೆ ನಡೆದಿದೆ. ಹುದ್ದೆಗಳ ಕಾಯಂ ಮಾಡಿ ಇಲ್ಲವೇ ವೇತನ ಹೆಚ್ಚಳ ಮಾಡಿ ಎಂದು ಅತಿಥಿ ಉಪನ್ಯಾಸಕರು ಸೋಮವಾರ ಆನಂದರಾವ್ ವೃತ್ತದ ಮೇಲುರಸ್ತೆ ಬಳಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ತಡೆಗಟ್ಟಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಐದು ಸಾವಿರಕ್ಕೂ ಹೆಚ್ಚಿನ ಉಪನ್ಯಾಸಕರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ವೇಮಗಲ್ ಸರ್ಕಾರಿ ಪದವಿ ಕಾಲೇಜಿನ ಉಪನ್ಯಾಸಕ ಗೋಪಿ ಎಂಬುವರು ಸ್ಥಳದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ಆ ಸಂದರ್ಭದಲ್ಲಿ ಪೊಲೀಸರು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು.
ಜೊತೆಗೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಉಪನ್ಯಾಸಕಿಯೊಬ್ಬರು ಅಸ್ವಸ್ಥರಾಗಿ ಕುಸಿದರು. ಪೊಲೀಸರು ಉಪನ್ಯಾಸಕರನ್ನು ಬಂಧಿಸಿ ಬಸ್ಸಿನಲ್ಲಿ ಕರೆದೊಯ್ಯುವ ಸಂದರ್ಭದಲ್ಲಿ ಬಸ್ಸಿನ ಬಾಗಿಲಿನಿಂದ ಜಾರಿ ಉಪನ್ಯಾಸಕರೊಬ್ಬರು ಕೆಳಕ್ಕೆ ಬಿದ್ದ ಘಟನೆಯೂ ನಡೆಯಿತು.
ಬೇಡಿಕೆಗಳು
ಹೊಸ ಅತಿಥಿ ಉಪನ್ಯಾಸಕ ನೇಮಕ ರದ್ದು ಮಾಡಬೇಕು
ನಮ್ಮನ್ನೇ ಅತಿಥಿ ಉಪನ್ಯಾಸಕರಾಗಿ ಮುಂದುವರಿಸಬೇಕು
ಕಾಯಂ ಉಪನ್ಯಾಸಕರಾಗಿ ನೇಮಿಸಿಕೊಳ್ಳಬೇಕು
25,000 ವೇತನ ನೀಡಬೇಕು
ನಾವು ಯಾವುದೇ ಕಾರಣಕ್ಕೂ ಪ್ರತಿಭಟನೆ ಹಿಂತೆಗೆದುಕೊಳ್ಳುವುದಿಲ್ಲ. ಕೆಲವರನ್ನು ಬಂಧಿಸಿ ನಗರದ ಹೊರವಲಯದ ಠಾಣೆಯಲ್ಲಿರಿಸಿಕೊಂಡಿದ್ದಾರೆ. ಸರ್ಕಾರ ಸೂಕ್ತ ಭರವಸೆ ನೀಡುವವರೆಗೂ ಪ್ರತಿಭಟನೆ ನಡೆಸುತ್ತೇವೆ.
- ಎಂ. ಮುನಿರಾಜು, ಅಧ್ಯಕ್ಷ,
ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಒಕ್ಕೂಟ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

