ಅಂಗವಿಕಲರನ್ನು ಅವಮಾನಿಸಿದ ಅಧಿಕಾರಿ ವಜಾಕ್ಕೆ ಆಗ್ರಹ
ಬೆಳಗಾವಿ: 'ಅಂಗವಿಕಲರು ಭಿಕ್ಷುಕರು. ಅವರಿಂದ ಸರ್ಕಾರಕ್ಕೆ ಹೊರೆ' ಎಂದು ಹೇಳಿಕೆ ನೀಡಿದ ರಾಜ್ಯ ಅಂಗವಿಕಲ ಹಾಗೂ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ನಿರ್ದೇಶಕರನ್ನು ಕೂಡಲೆ ರಾಜ್ಯ ಸರ್ಕಾರ ಸೇವೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರು ಹಾಗೂ ವಿವಿಧೋದ್ದೇಶಗಳ (ಎಂಆರ್‌ಡಬ್ಲ್ಯೂ) ಮತ್ತು ಗ್ರಾಮೀಣ ಪುನರ್ವಸತಿ (ವಿಆರ್‌ಡಬ್ಲ್ಯೂ) ಒಕ್ಕೂಟದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು. ನಂತರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು.
ಇತ್ತೀಚೆಗೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದ ಹಂಪಿ ಉತ್ಸವ ನಿಮಿತ್ತ ಏರ್ಪಡಿಸಿದ್ದ ರಾಜ್ಯ ಮಟ್ಟದ ಅಂಗವಿಕಲರ ಕ್ರೀಡಾಕೂಟಕ್ಕೆ ಆಗಮಿಸಿದ್ದ ನಿರ್ದೇಶಕರ ಮುಂದೆ ತಮ್ಮ ಸಂಕಷ್ಟಗಳಿಗೆ ಸ್ಪಂದಿಸುವಂತೆ ಮನವಿ ಮಾಡಿಕೊಂಡಾಗ ಅವಮಾನಕಾರಿ ಹೇಳಿಕೆಯನ್ನು ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ರಾಜ್ಯದಲ್ಲಿ 35 ಲಕ್ಷಕ್ಕೂ ಅಧಿಕ ಅಂಗವಿಕಲರಿದ್ದಾರೆ. ಅವರ ಪುನರ್ವಸತಿಗಾಗಿ ಸರ್ಕಾರ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಮೂಲಕ ರಾಜ್ಯ 176 ತಾಲೂಕುಗಳಿಗೆ ಪದವೀಧರ ಅಂಗವಿಕಲರನ್ನು ಎಂಆರ್‌ಡಬ್ಲ್ಯೂ ಆಗಿ ಮತ್ತು 5628 ಗ್ರಾಪಂಗಳಲ್ಲಿ ಎಸ್‌ಎಸ್‌ಎಲ್‌ಸಿ ಪೂರೈಸಿದವರನ್ನು ವಿಆರ್‌ಡಬ್ಲ್ಯೂಗಳೆಂದು ನೇಮಿಸಿದೆ. ಆದರೆ, ಕಳೆದ 7 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ಯಾವುದೇ ರೀತಿಯ ಸೇವಾ ಭದ್ರತೆಯಿಲ್ಲ. ಕಡಿಮೆ ವೇತನ ನೀಡುವ ವ್ಯವಸ್ಥೆಯಿದೆ. ಇಂಥ ಅತಂತ್ರ ಸ್ಥಿತಿಯಲ್ಲಿರುವವರಿಗೆ ಸೇವಾ ಭದ್ರತೆ, ಕನಿಷ್ಠ ವೇತನ ನೀಡುವಂತೆ ಕೇಳಿದಕ್ಕೆ 'ಭಿಕ್ಷುಕರು' ಎಂದು ಕರೆಯುವ ಮೂಲಕ ಅವಮಾನವೆಸಗಿದ್ದಾರೆ ಎಂದು ಕಿಡಿಕಾರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

