ಪ್ರಧಾನ ಸುದ್ದಿ

ಸುನಂದಾ ಸಾವಿನ ತನಿಖೆ ಗೋಜಲು

ಸುನಂದಾ ಸಾವಿನ ತನಿಖೆ ಗೋಜಲು
Published On :

ನವದೆಹಲಿ: ಮರಣೋತ್ತರ ಪರೀಕ್ಷೆ ವರದಿ ತಿರುಚುವಂತೆ ತಮ್ಮ ಮೇಲೆ ಒತ್ತಡ ಹೇರಲಾಗಿತ್ತು ಎಂದು ಏಮ್ಸ್ ವೈದ್ಯ ಡಾ.ಸುಧೀರ್ ಗುಪ್ತಾ ಆರೋಪಿಸಿದ ಬಳಿಕ ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಸಾವು ಹೊಸಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರಿಗೆ ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್.ಬಸ್ಸಿ ಬುಧವಾರ ತನಿಖೆಯ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಡಾ.ಗುಪ್ತಾ ತಮಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ವಿವರ ವರದಿ ನೀಡುವಂತೆ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಏಮ್ಸ್‌ಗೆ ನಿರ್ದೇಶನ ನೀಡಿದ್ದಾರೆ. ಅಗತ್ಯ ಬಿದ್ದರೆ ತರೂರ್ ಮತ್ತು ಡಾ.ಗುಪ್ತಾ ಇಬ್ಬರನ್ನೂ ವಿಚಾರಣೆಗೆ ಒಳಪಡಿಸುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ. ಬಿಜೆಪಿ ಮುಖಂಡ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸುನಂದಾ ಕೊಲೆಯಲ್ಲಿ ರಾಬರ್ಟ್ ವಾದ್ರಾ ಕೈವಾಡ ಶಂಕಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.