ಕಾಶಪ್ಪನವರ ಸೆರೆಗೆ ವಿಳಂಬ

ಬಳ್ಳಾರಿ: ಪೊಲೀಸ್ ಪೇದೆಗಳ ಮೇಲೆ ಹಲ್ಲೆ ಮಾಡಿದ ಶಾಸಕ ವಿಜಯಾನಂದ ಕಾಶಪ್ಪನರವ ಅವರನ್ನು ಏಕೆ ಬಂಧಿಸಿಲ್ಲ ಎಂಬುದಕ್ಕೆ ಸರ್ಕಾರ ಸೂಕ್ತ ಉತ್ತರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಆಗ್ರಹಿಸಿದರು.
ಬಳ್ಳಾರಿಯಲ್ಲಿ ಭಾನುವಾರ ನಡೆದ ಬಿಜೆಪಿ ಸ್ಲಂ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಕಾಶಪ್ಪನವರ ಹಲ್ಲೆ ನಡೆಸಿ ಇಷ್ಟು ದಿನವಾದರೂ ಬಂಧಿಸದಿರಲು ಕಾರಣವೇನು? ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಕ್ರಮ ಚಟುವಟಿಕೆ ಅಧಿಕವಾಗಿವೆ. ಹೈಟೆಕ್ ಪದ್ಧತಿಯಲ್ಲಿ ಮಟಕಾ, ಓಸಿ ದಂಧೆಗಳು ನಡೆಯುತ್ತಿವೆ.
ಅಧಿಕಾರಿಗಳ ವರ್ಗಾವಣೆಯಲ್ಲೂ ಅಕ್ರಮ ನಡೆದಿದೆ. ಇದರಿಂದಾಗಿಯೇ ಪೊಲೀಸ್ ಇಲಾಖೆ ನೈತಿಕತೆ ಕಳೆದುಕೊಳ್ಳುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಎಡವಿದೆ. ಜಿಲ್ಲೆಗಳ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಗಳ ಬರ ನಿರ್ವಹಣೆಯಲ್ಲಿ ತೊಡಗಿಲ್ಲ. ಬರದ ಹೆಸರಿನಲ್ಲಿ ಹಣ ವೆಚ್ಚ ಮಾಡುತ್ತಿದ್ದರೂ ಕೆಲಸಗಳಾಗುತ್ತಿಲ್ಲ. ವಿದ್ಯುತ್ ಸಮಸ್ಯೆ ಬಿಗಡಾಯಿಸುತ್ತಿದ್ದು, ಇಂಧನ ಸಚಿವ ಡಿಕೆಶಿ ಪರಿಹಾರಕ್ಕೆ ದೇವರ ಮೊರೆ ಹೋಗಿರುವುದು ಹಾಸ್ಯಾಸ್ಪದ ಎಂದರು. ಜು. 12 ಮತ್ತು 13ರಂದು ಮೈಸೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ಜರುಗಲಿದೆ. ಶಿವಮೊಗ್ಗ, ಬಳ್ಳಾರಿ, ಗ್ರಾಮೀಣ, ಚಿಕ್ಕೋಡಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಎಂದರು.
ಹೊರಟ್ಟಿ ಟೀಕೆ
ಗದಗ: ಶಾಸಕ ವಿಜಯಾನಂದ ಕಾಶಪ್ಪನವರ ಪ್ರಕರಣ ಎರಡು ದಿನ ಸದನದ ಕಲಾಪ ಹಾಳು ಮಾಡಿದ್ದು, ಕೋಟ್ಯಂತರ ರುಪಾಯಿ ನಷ್ಟ ಆಗಿದೆ. ಶಾಸಕರಾಗಲಿ, ಸಾಮಾನ್ಯ ಜನರಾಗಲಿ ಕಾನೂನಿಗೆ ಗೌರವ ನೀಡಬೇಕು. ಕಾಶಪ್ಪನವರ ತಪ್ಪು ಮಾಡಿದ್ದಲ್ಲಿ ಅವರಿಗೆ ಶಿಕ್ಷೆಯಾಗಲಿ, ಆದರೆ ಬಿಜೆಪಿ ಈ ವಿಚಾರವಾಗಿ ಸದನದ ಸಮಯ ಹಾಳು ಮಾಡಿದ್ದು ಸರಿಯಲ್ಲ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


