ಪ್ರಧಾನ ಸುದ್ದಿ

ಪ್ರಸಕ್ತ ಸಾಲಿನಲ್ಲಿ ಗಣಿ ಅನುಮತಿ ಇಲ್ಲ

ಪ್ರಸಕ್ತ ಸಾಲಿನಲ್ಲಿ ಗಣಿ ಅನುಮತಿ ಇಲ್ಲ
Published On :

ನವದೆಹಲಿ: ಕರ್ನಾಟಕದಲ್ಲಿ 2013-14ನೇ ಸಾಲಿನಲ್ಲಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸೇರಿದಂತೆ ಯಾವುದೇ ಚಟುವಟಿಕೆಗೆ ಕೇಂದ್ರ ಅರಣ್ಯ ಇಲಾಖೆಯು ಅನುಮತಿ ನೀಡಿಲ್ಲ. ಆದರೆ, ಬೇರೆ ರಾಜ್ಯಗಳಲ್ಲಿ 74 ವಿವಿಧ ಚಟುವಟಿಕೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಕೇಂದ್ರ ಗಣಿ ಸಚಿವರು ಲೋಕಸಭೆಯಲ್ಲಿ ಸೋಮವಾರ ಚಾಮರಾಜನಗರ ಸದಸ್ಯ ಧ್ರುವನಾರಾಯಣ ಅವರಿಗೆ ನೀಡಿರುವ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ್ದಾರೆ. ಪರಿಸರ ಪರಿಣಾಮ ಅಂದಾಜು ಅಧಿಸೂಚನೆ 2006ರ ಅಡಿಯಲ್ಲಿ ಗಣಿಗಾರಿಕೆ ಸೇರಿದಂತೆ ಯಾವುದೇ ಚಟುವಟಿಕೆಗಳಗೆ ಅನುಮತಿ ನೀಡಿಲ್ಲ.
ಅಂಕಿ-ಅಂಶ: ರಾಷ್ಟ್ರದಲ್ಲಿ ಈಗಿರುವ ಅರಣ್ಯ ಪ್ರದೇಶ 7,69,538 ಚದರ ಕಿ.ಮೀ. ಅಂದರೆ ಶೇ.23.40ರಷ್ಟು ಪ್ರದೇಶ ಅರಣ್ಯಾವೃತವಾಗಿದೆ. ಅರಣ್ಯ ಸಮೃದ್ಧ ಹತ್ತು ರಾಷ್ಟ್ರಗಳ ಪೈಕಿ ಭಾರತವೂ ಒಂದು. ಕಳೆದೊಂದು ದಶಕದಲ್ಲಿ ಭಾರತದಲ್ಲಿ ಅರಣ್ಯ ಪ್ರದೇಶ ಶೇ. 0.46ರಷ್ಟು ಬೆಳೆದಿದೆ ಎಂದು ಫಾರೆಸ್ಟ್ ಸರ್ವೆ ಆಫ್ ಇಂಡಿಯಾ (ಎಫ್ಎಸ್ಐ) ಇತ್ತೀಚೆಗೆ ಬಿಡುಗಡೆ ಮಾಡಿರುವ ವರದಿ ತಿಳಿಸಿದೆ.
ಪ್ರಮಾಣ ವಚನ ಸ್ವೀಕಾರ: ಚಿಕ್ಕೋಡಿ ಲೋಕಸಭಾ ಸದಸ್ಯ ಚಿಕ್ಕೋಡಿ ಪ್ರಕಾಶ್ ಸೋಮವಾರ ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾದ ಪ್ರೊ. ರಾಜೀವ್ ಗೌಡ ಹಾಗೂ ಬಿ.ಕೆ. ಹರಿಪ್ರಸಾದ್ ಅವರೂ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಕಾಶ್ ಹುಕ್ಕೇರಿ ಹಾಗೂ ಪ್ರೊ. ರಾಜೀವ್ಗೌಡ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.