ಪ್ರಧಾನ ಸುದ್ದಿ

ಬಿಜೆಪಿ ಸಭಾತ್ಯಾಗ

ಬಿಜೆಪಿ ಸಭಾತ್ಯಾಗ
Published On :

ವಿಧಾನಸಭೆ: ಬಾರ್ನಲ್ಲಿ ದುಂಡಾವರ್ತನೆ ಪ್ರದರ್ಶಿಸಿದ ಶಾಸಕ ವಿಜಯಾನಂದ ಕಾಶಪ್ಪನವರ್ ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆಸಿದ ಶಾಸಕ ಭೈರತಿ ಬಸವರಾಜ್ ಪ್ರಕರಣದಲ್ಲಿ ಸರ್ಕಾರ ತಿಪ್ಪೆ ಸಾರಿಸುವ ಉತ್ತರ ನೀಡಿದೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಸೋಮವಾರ ಸಭಾತ್ಯಾಗ ನಡೆಸಿದರು.
ಸದನ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಕಾಶಪ್ಪನವರ್ ಪ್ರಕರಣವನ್ನು ಪ್ರಸ್ತಾಪಿಸಿ, ಉತ್ತರ ನೀಡುವಂತೆ ಆಗ್ರಹಿಸಿದರು. ಪ್ರಶ್ನೋತ್ತರ ಕಲಾಪಕ್ಕೆ ಮುನ್ನವೇ ಉತ್ತರ ನೀಡುವಂತೆ ಗೃಹ ಸಚಿವ ಕೆ.ಜೆ.ಜಾರ್ಜ್ ಅವರ ವಿರುದ್ಧ ಪಟ್ಟು ಹಿಡಿದರು.
ಇದಕ್ಕೆ ಮಣಿದ ಜಾರ್ಜ್ ನೀಡಿದ ಉತ್ತರ ಬಿಜೆಪಿ ಸದಸ್ಯರಿಗೆ ಸಮಾಧಾನ ತಾರದೇ ಇದ್ದುದರಿಂದ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಸರ್ಕಾರ ಪೊಲೀಸರಿಗೆ ಸ್ವತಂತ್ರವಾಗಿ ಕರ್ತವ್ಯ ನಿರ್ವಹಿಸುವುದಕ್ಕೆ ಅವಕಾಶ ನೀಡುತ್ತಿಲ್ಲ. ಅವರ ಕರ್ತವ್ಯ ನಿರ್ವಹಣೆ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡುತ್ತಿದೆ. ಕಾಶಪ್ಪನವರ್ ಹಾಗೂ ಭೈರತಿ ಬಸವರಾಜ್ ಪ್ರಕರಣದಲ್ಲೂ ಹೀಗೇ ಆಗಿದೆ ಎಂದು ಆರೋಪಿಸಿ ಸಭಾತ್ಯಾಗ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.