ಪ್ರಧಾನ ಸುದ್ದಿ

ಮದನಿಗೆ ತಿಂಗಳ ಷರತ್ತಿನ ಜಾಮೀನು

ಮದನಿಗೆ ತಿಂಗಳ ಷರತ್ತಿನ ಜಾಮೀನು
Published On :

-ಕನ್ನಡಪ್ರಭ ಪ್ರತಿನಿಧಿಯಿಂದ
ನವದೆಹಲಿ:
ಬೆಂಗಳೂರು ಸರಣಿ ಸ್ಫೋಟದ  ಪ್ರಮುಖ ಆರೋಪಿ ಅಬ್ದುಲ್ ನಾಸರ್ ಮದನಿಗೆ ಸುಪ್ರೀಂಕೋರ್ಟ್ ಒಂದು ತಿಂಗಳು ಷರತ್ತುಬದ್ಧ ಜಾಮೀನು ನೀಡಿದೆ.
ಆರೋಪಿಯು ಜಾಮೀನು ಅವಧಿಯಲ್ಲಿ ಬೆಂಗಳೂರು ಬಿಟ್ಟು ತೆರಳಬಾರದು, ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು ಮತ್ತು ಕರ್ನಾಟಕ ಸರ್ಕಾರ ಆರೋಪಿ ಮೇಲೆ ನಿಗಾ ಇಡಬೇಕು ಎಂಬ ಷರತ್ತುಗಳನ್ನು ನ್ಯಾ.ಚಲಮೇಶ್ವರ ಮತ್ತು ನ್ಯಾ.ಎ.ಕೆ. ಸಿಕ್ರಿ ಅವರಿದ್ದ ದ್ವಿಸದಸ್ಯ ಪೀಠವು ವಿಧಿಸಿದೆ.
ಶುಕ್ರವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠದ ಮುಂದೆ ರಾಜ್ಯ ಸರ್ಕಾರದ ಪರ ವಕೀಲರು ಜಾಮೀನು ನೀಡಬಾರದು ಎಂದು ಮನವಿ ಮಾಡಿದರು. ಜಾಮೀನು ನೀಡಿದರೆ ಬೆಂಗಳೂರು ಸ್ಫೋಟ  ಪ್ರಕರಣವಷ್ಟೆ ಅಲ್ಲದೆ ಆತನ ಮೇಲೆ ಇರುವ ಇತರ ಪ್ರಕರಣಗಳ ಸಾಕ್ಷಿಗಳನ್ನು ನಾಶ ಪಡಿಸುವ ಸಾಧ್ಯತೆ ಇದೆ ಎಂದರು.
ಆದರೆ, ಮದನಿ ಪರ ವಕೀಲರು, ಅನಾರೋಗ್ಯ ಕಾರಣಕ್ಕಾಗಿ ಜಾಮೀನು ನೀಡಬೇಕೆಂದು ಕೋರಿದರು. ಆನಾರೋಗ್ಯಕ್ಕೆ ಸಂಬಂಧಿಸಿದ ದಾಖಲೆ ಪರಿಶೀಲಿಸಿದ ನ್ಯಾಯಪೀಠವು ಜಾಮೀನು ಮಂಜೂರು ಮಾಡಿದೆ.
2008ರಲ್ಲಿ ನಡೆದ ಬೆಂಗಳೂರು ಸರಣಿ ಸ್ಫೋಟದಲ್ಲಿ ಒಬ್ಬ ಮಹಿಳೆ ಮೃತಪಟ್ಟು ಹಲವರು ಗಾಯಗೊಂಡಿದ್ದರು.  ನಾಲ್ಕು ವರ್ಷಗಳಿಂದ ಬೆಂಗಳೂರು ಜೈಲಿನಲ್ಲಿರುವ ಅಬ್ದುಲ್ ಮದನಿ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿತ್ತು. ಆತನಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ಮದನಿಗೆ ಇತ್ತೀಚೆಗೆ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.