ಪ್ರಧಾನ ಸುದ್ದಿ

ರಾಜ್ಯದಲ್ಲಿಲ್ಲ ಮಹಿಳೆಗೆ ರಕ್ಷಣೆ

ರಾಜ್ಯದಲ್ಲಿಲ್ಲ ಮಹಿಳೆಗೆ ರಕ್ಷಣೆ
Published On :

ಕ.ಪ್ರ.ವಾರ್ತೆ, ತುಮಕೂರು, ಜು.16
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಮಹಿಳೆಯರು ಕತ್ತಲೆಯಾದ ಮೇಲೆ ಹೊರಗೆ ಕಾಲಿಡಲಾಗದ ಸ್ಥಿತಿ ನಿರ್ಮಾಣವಾಗಿದೆ. ಗೃಹ ಸಚಿವರ ರಾಜಿನಾಮೆ ನೀಡಲಿ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದರು.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಯುವತಿ ಮೇಲೆ ಸೋಮವಾರ ನಡೆದಿರುವ ಅತ್ಯಾಚಾರ ನಿಜಕ್ಕೂ ರಾಜ್ಯದ ಜನತೆ ತಲೆ ತಗ್ಗಿಸುವಂತೆ ಮಾಡಿದೆ. ಸಂಕಷ್ಟಕ್ಕೊಳಗಾದ ಯುವತಿ ನೀಡಿದ ದೂರನ್ನು ತಿರುಚಿ ಹಾಕಿದ ಪೊಲೀಸರ ಕೃತ್ಯ ಖಂಡನೀಯ. ಕಾನೂನು ಸುವ್ಯವಸ್ಥೆ ನಿಯಂತ್ರಿಸುವಲ್ಲಿ ವಿಫಲವಾದ ಗೃಹ ಸಚಿವ ಕೆ.ಜೆ. ಜಾರ್ಜ್ ರಾಜಿನಾಮೆ ನೀಡಲಿ ಎಂದು ಆಗ್ರಹಿಸಿದರು.
ಕಾಂಗ್ರೆಸ್‌ಗೆ ಭಯ: ರಾಜ್ಯದಲ್ಲಿ ನಡೆದಿರುವ ವಿದ್ಯುತ್ ಅವ್ಯವಹಾರಗಳ ತನಿಖೆಗೆ ಸದನ ಸಮಿತಿ ರಚಿಸಲು ಕಾಂಗ್ರೆಸ್ ಹೆದರುತ್ತಿದೆ.
ಅವರ ಕಾಲದಲ್ಲಿ ನಡೆದಿರುವ ಅವ್ಯವಹಾರಗಳು ಬೆಳಕಿಗೆ ಬರುತ್ತವೆಯೋ ಎಂಬ ಭಯದಿಂದ ಹಿಂದೇಟು ಹಾಕುತ್ತಿದೆ. ಆದರೆ, ಬಿಜೆಪಿ ಯಾವುದೇ ಬಗೆಯ ತನಿಖೆಗೂ ಸಿದ್ಧ ಎಂದು ಹೇಳಿದರು.
ಸರ್ಕಾರ ನಿದ್ರಿಸುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಸಮಾರಂಭಗಳಲ್ಲಿ ನಿದ್ರಿಸುವಂತೆ ಅವರ ಸರ್ಕಾರವೂ ಮಲಗಿದೆ ಎಂದು ಕಾರ್ಯಕ್ರಮವೊಂದರಲ್ಲಿ ಜಗದೀಶ್ ಶೆಟ್ಟರ್ ಲೇವಡಿ ಮಾಡಿದರು.
ರಾಜ್ಯದಲ್ಲಿ ಕಬ್ಬು, ತೆಂಗು, ಅಡಕೆ, ಆಲೂಗಡ್ಡೆ, ಈರುಳ್ಳಿ ಬೆಳೆಗಾರರು ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ರಾಜ್ಯ ಸರ್ಕಾರ ಕಿಂಚಿತ್ತೂ ಗಮನಹರಿಸುತ್ತಿಲ್ಲ. ಆ ಮೂಲಕ ರೈತರನ್ನು ಸರ್ಕಾರ ಅವಮಾನಿಸುತ್ತಿದೆ ಎಂದರು.
ಯುವತಿ ಮೇಲೆ ನಡೆದಿರುವ ಅತ್ಯಾಚಾರ ನಿಜಕ್ಕೂ ರಾಜ್ಯದ ಜನತೆ ತಲೆ ತಗ್ಗಿಸುವಂತೆ ಮಾಡಿದೆ. ಸಂಕಷ್ಟಕ್ಕೊಳಗಾದ ಯುವತಿ ನೀಡಿದ ದೂರನ್ನು ತಿರುಚಿ ಹಾಕಿದ ಪೊಲೀಸರ ಕೃತ್ಯ ಖಂಡನೀಯ. ಕಾನೂನು ಸುವ್ಯವಸ್ಥೆ ನಿಯಂತ್ರಿಸುವಲ್ಲಿ ವಿಫಲವಾದ ಗೃಹ ಸಚಿವ ಕೆ.ಜೆ. ಜಾರ್ಜ್ ರಾಜಿನಾಮೆ ನೀಡಲಿ.
- ಜಗದೀಶ್ ಶೆಟ್ಟರ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.