ದಸರಾ ಉದ್ಘಾಟನೆಗೆ ಡಾ.ಗಿರೀಶ್ ಕಾರ್ನಾಡ್

ಕನ್ನಡಪ್ರಭ ವಾರ್ತೆ, ಬೆಂಗಳೂರು, ಜು.19
ಈ ಬಾರಿಯ ದಸರಾ ಉತ್ಸವದ ಉದ್ಘಾಟನೆಗೆ ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ.ಗಿರೀಶ್ ಕಾರ್ನಾಡ್ ಅವರನ್ನು ಆಹ್ವಾನಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಚಿವರಾದ ವಿ.ಶ್ರೀನಿವಾಸ್ ಪ್ರಸಾದ್, ಎಚ್.ಎಸ್.ಮಹಾದೇವಪ್ಪ, ಮೈಸೂರು ಸಂಸದ ಪ್ರತಾಪ ಸಿಂಹ, ಮೈಸೂರು ಜಿಲ್ಲಾ ಶಾಸಕರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.
ಸಾಹಿತಿಗಳಾದ ನಿಸಾರ್ ಅಹ್ಮದ್, ಚನ್ನವೀರ ಕಣವಿ, ಸುಧಾಮೂರ್ತಿ, ಎಸ್.ಎಲ್.ಭೈರಪ್ಪ, ವಿಜ್ಞಾನಿ ಕಸ್ತೂರಿ ರಂಗನ್, ಯು.ಆರ್.ರಾವ್, ರಂಗಕರ್ಮಿ ಏಣಗಿ ಬಾಳಪ್ಪ, ನೃತ್ಯ ಕಲಾವಿದೆ ಮಾಯಾರಾವ್, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರಸ್ವಾಮಿ ಅವರ ಹೆಸರೂ ಪ್ರಸ್ತಾಪವಾಯಿತು.
ಸರಸ್ವತಿ ಸಮ್ಮಾನ್ ಪ್ರಶಸ್ತಿ ಪಡೆದ ದಕ್ಷಿಣ ಭಾರತದ ಏಕೈಕ ಸಾಹಿತಿ ಎಂಬ ಗೌರವಕ್ಕೆ ಭೈರಪ್ಪ ಪಾತ್ರರಾಗಿದ್ದಾರೆ. ಹೀಗಾಗಿ ಅವರನ್ನು ಉದ್ಘಾಟನೆಗೆ ಆಹ್ವಾನಿಸುವುದು ಸೂಕ್ತ ಎಂದು ಪ್ರತಾಪ್ ಅಭಿಪ್ರಾಯಪಟ್ಟರು. ಇದಕ್ಕೆ ಮೈಸೂರು ಭಾಗದ ಶಾಸಕರೂ ಧ್ವನಿಗೂಡಿಸಿದರು. ಆದರೆ ಚಂದ್ರಶೇಖರ ಕಂಬಾರ ಅವರಿಗಿಂತ ಮೊದಲು ಕಾರ್ನಾಡ್ ಜ್ಞಾನಪೀಠ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


