ಪ್ರಧಾನ ಸುದ್ದಿ

ಕಠಿಣ ಕ್ರಮ ಕೈಗೊಳ್ಳದಿದ್ದರೆ ಕೇಂದ್ರದ ಮಧ್ಯಪ್ರವೇಶ

ಕಠಿಣ ಕ್ರಮ ಕೈಗೊಳ್ಳದಿದ್ದರೆ ಕೇಂದ್ರದ ಮಧ್ಯಪ್ರವೇಶ
Published On :

ಕ.ಪ್ರ.ವಾರ್ತೆ, ಬೆಂಗಳೂರು, ಜು.19
ಅತ್ಯಾಚಾರ ಪ್ರಕರಣ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳದಿದ್ದರೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕಾಗುತ್ತದೆ ಎಂದು ರೈಲ್ವೆ ಸಚಿವ ಡಿ.ವಿ.ಸದಾನಂದಗೌಡ ಎಚ್ಚರಿಸಿದ್ದಾರೆ.
ಆನೆ ನಡೆದಿದ್ದೇ ಹಾದಿ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ. ಅತ್ಯಾಚಾರ ಪ್ರಕರಣಗಳನ್ನು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಲಘುವಾಗಿ ಪರಿಗಣಿಸಿದ್ದಾರೆ. ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಅನಿವಾರ್ಯವಾಗಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕಾಗುತ್ತದೆ. ಇದಕ್ಕೂ ಮುಂಚೆ ರಾಜ್ಯ ಸರ್ಕಾರ ಮಹಿಳೆ ಹಾಗೂ ಮಕ್ಕಳಿಗೆ ಭದ್ರತೆ ನೀಡಬೇಕು. ಆತಂಕದ ವಾತಾವರಣ ದೂರ ಮಾಡಬೇಕು ಎಂದು ಅವರು ನಗರದಲ್ಲಿ ಶನಿವಾರ ಆಗ್ರಹಿಸಿದ್ದಾರೆ.
ಇದೇ ಸಂದರ್ಭದಲ್ಲಿ ರೈಲ್ವೆ ಯೋಜನೆಗಳ ಅನುದಾನ ಹಂಚಿಕೆ ಕುರಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕ್ಕೆ ಪ್ರತಿಕ್ರಿಯಿಸಿರುವ ಅವರು, ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದದ ಪ್ರಕಾರ ಉಚಿತ ಭೂಮಿ ಹಾಗೂ ಶೇ.50 ಅನುದಾನ ನೀಡಬೇಕು. ಆದರೆ ಸರ್ಕಾರ ತನ್ನ ಪಾಲಿನ ಬಂಡವಾಳ ಹೂಡಲು ವಿಳಂಬ ಮಾಡುತ್ತಿದೆ. ಈ ಸಂಬಂಧ ಸಿದ್ದರಾಮಯ್ಯ ಬರೆದಿರುವ ಪತ್ರ ಸೂಕ್ತವಾಗಿಲ್ಲ ಎಂದು ಹೇಳಿದ್ದಾರೆ.
ಡಿವಿಎಸ್‌ಗೆ ಸಿಎಂ ತಿರುಗೇಟು: ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ. ಮಹಿಳೆ ಹಾಗೂ ಮಕ್ಕಳ ಸುರಕ್ಷೆಗೆ ಎಲ್ಲ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ. ಆದರೆ ಅನವಶ್ಯಕವಾಗಿ ಪ್ರತಿಪಕ್ಷಗಳು ಆರೋಪ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಸದಾನಂದಗೌಡರು ಮುಖ್ಯಮಂತ್ರಿಯಾಗಿದ್ದಾಗಲೂ ದೊಡ್ಡ ಸಂಖ್ಯೆಯಲ್ಲಿ ಅತ್ಯಾಚಾರ ಪ್ರಕರಣಗಳು ನಡೆದಿವೆ. ಆಗಲೂ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿತ್ತೆ? ರಾಜ್ಯದಲ್ಲಿ ಅತ್ಯಾಚಾರ ನಡೆದಿರುವುದು ನಿಜ. ಆದರೆ ಪ್ರಕರಣ ವಿಚಾರಣೆಗೆ ಸರ್ಕಾರ ತ್ವರಿತ ಕ್ರಮ ಕೈಗೊಂಡಿದೆ. ಮೊದಲ ಬಾರಿಗೆ ಒಬ್ಬ ಪೊಲೀಸ್ ಅಧಿಕಾರಿ ವಿರುದ್ಧವೇ ದೂರು ದಾಖಲಿಸಿ ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.