ಲಗ್ನ ಪತ್ರಿಕೆ ಪ್ರಿಂಟ್ಇರಲಿ ಎಚ್ಚರಿಕೆ
ಚಿಕ್ಕಪ್ಪನಹಳ್ಳಿ ಷಣ್ಮುಖ
ಬಾಗಲಕೋಟೆ: ವಧು, ವರರ ಕಡೆಯವರು ಲಗ್ನ ಪತ್ರಿಕೆ ಮುದ್ರಿಸಿ ಕೊಡಲು ಕೇಳಿದಾಗ ಸುಮ್ಮನೆ ಒಪ್ಪಿಕೊಳ್ಳಬೇಡಿ. ಮದುವೆ ಮಾಡಿಕೊಳ್ಳಲು ನಿಗದಿಪಡಿಸಲಾದ ವಯೋವಾನ ವಧು ಹಾಗೂ ವರನಿಗೆ ಆಗಿದೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಿ. ಇಲ್ಲದಿದ್ದರೆ ದಂಡ ಅಥವಾ ಜೈಲು ಶಿಕ್ಷೆ ಅನುಭವಿಸಬೇಕಾದೀತು ಹುಷಾರ್!
ಇದು ಕೇವಲ ಪ್ರಿಂಟಿಂಗ್ ಪ್ರೆಸ್ ಮಾಲೀಕರಿಗಷ್ಟೇ ಅನ್ವಯಿಸುವುದಿಲ್ಲ. ಪುರೋಹಿತರು, ಮಂಗಳ ಭವನದ ಮುಖ್ಯಸ್ಥರೂ ಗಮನಿಸುವುದು ಕಡ್ಡಾಯ. ಇದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಾಜ್ಯದ ಎಲ್ಲ ಜಿಲ್ಲೆಗಳ ಉಪನಿರ್ದೇಶಕರಿಗೆ ಇಂಥದ್ದೊಂದು ಸಂದೇಶ ರವಾನಿಸಿದೆ.
ಇದಕ್ಕೇನು ಕಾರಣ?: ಬಾಲ್ಯ ವಿವಾಹ ತಡೆಗಟ್ಟಲು ಸರ್ಕಾರ ಇಂಥದ್ದೊಂದು ನಿರ್ಧಾರಕ್ಕೆ ಬಂದಿದೆ. ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾ. ಶಿವರಾಜ ಪಾಟೀಲ್ ಜೂನ್ 30, 2011ರಂದು ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ಹೈ ಕೋರ್ಟ್ಗೆ ಸಲ್ಲಿಸಿದ ಕೋರ್ ಕಮಿಟಿ ವರದಿ ಅನ್ವಯ ಇಂಥದ್ದೊಂದು ತೀರ್ಮಾನಕ್ಕೆ ಸರ್ಕಾರ ಬಂದಿದೆ.
ಶಿಕ್ಷೆ ಏನು?: ಪೋಷಕರೊಂದಿಗೆ, ಬಾಲ್ಯ ವಿವಾಹ ನೆರವೇರಲು ಕಾರಣವಾಗುವ ಎಲ್ಲರೂ ಅಪರಾಧಿಗಳಾಗುತ್ತಾರೆ. ಸಮಾರಂಭದಲ್ಲಿ ಭಾಗವಹಿಸುವ ಎಲ್ಲರ ವಿರುದ್ಧವೂ ಪ್ರಕರಣ ದಾಖಲು ಮಾಡುವ ಅವಕಾಶವಿರುತ್ತದೆ. ಎರಡು ವರ್ಷ ಜೈಲು ಶಿಕ್ಷೆ, 1 ಲಕ್ಷ ದಂಡ ವಿಧಿಸಬಹುದು.
ಯಾವ ದಾಖಲೆಗಳನ್ನು ಪರಿಗಣಿಸಬಹುದು?: ವಧು ವರರ ಶಾಲಾ ದೃಢೀಕರಣ ಪತ್ರ, ಎಸ್ಸೆಸ್ಸೆಲ್ಸಿ ಅಂಕ ಪಟ್ಟಿ ಅಥವಾ ಸರ್ಕಾರಿ ವೈದ್ಯರು ರೇಡಿಯೋಲಜಿ ಪರೀಕ್ಷೆಯ ಮೂಲಕ ನೀಡಿದ ದೃಢೀಕರಣ ಪತ್ರಗಳು ಅರ್ಹವಾಗುತ್ತವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

