ಪ್ರಧಾನ ಸುದ್ದಿ

ಗೂಂಡಾ ಕಾಯಿದೆಗೆ ಅಗತ್ಯ ತಿದ್ದುಪಡಿ

ಗೂಂಡಾ ಕಾಯಿದೆಗೆ ಅಗತ್ಯ ತಿದ್ದುಪಡಿ
Published On :

ವಿಧಾನಸಭೆ: ಒಂದು ಬಾರಿ ಅತ್ಯಾಚಾರ ಮಾಡಿದವರ ಮೇಲೂ ಗೂಂಡಾ ಕಾಯಿದೆ ಜಾರಿಗೊಳಿಸುವ ಉದ್ದೇಶದಿಂದ ಕಾಯಿದೆಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದ್ದು, ಭಯದ ವಾತಾವರಣ ಸೃಷ್ಟಿಸುವವರಿಗೆ ಭಯ ಬರಿಸೋದು ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಆರು ವರ್ಷದ ವಿದ್ಯಾರ್ಥಿನಿ ಮೇಲೆ ಶಿಕ್ಷಕ ಅತ್ಯಾಚಾರ ಮಾಡಿದ್ದಾನೆ. ಹಾವೇರಿಯಲ್ಲಿ 65 ವರ್ಷದ ವೃದ್ಧ ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾನೆ. ಇದೆಲ್ಲ ಪೈಶಾಚಿಕ ಕೃತ್ಯ. ಇಂತಹವರಿಗೆ ಕಠಿಣವಾದ ಶಿಕ್ಷೆ ಆಗಬೇಕಿದೆ. ಆದ್ದರಿಂದ ಕಾನೂನಿಗೆ ತಿದ್ದುಪಡಿ ಸೇರಿದಂತೆ ಎಲ್ಲ ಪ್ರಯತ್ನವನ್ನೂ ಸರ್ಕಾರ ಮಾಡಲಿದೆ ಎಂದು ವಿಧಾನಸಭೆಯಲ್ಲಿ ಸೋಮವಾರ ತಿಳಿಸಿದರು.  
ರಾಜ್ಯದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳ ಬಗ್ಗೆ ನಿಯಮ 69ರಲ್ಲಿ ಪ್ರತಿಪಕ್ಷಗಳ ಚರ್ಚೆಯ ನಂತರ ಮುಖ್ಯಮಂತ್ರಿ ಮಾತನಾಡಿದರು.
ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಶೀಘ್ರ ವಿಲೇವಾರಿಗೆ ತ್ವರಿತ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಬದ್ಧವಾಗಿದ್ದು, ಇಂತಹ 10 ನ್ಯಾಯಾಲಯ ಸ್ಥಾಪಿಸಲಾಗುವುದು. ಈ ಸಂಬಂಧ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರೊಂದಿಗೆ ಕಾನೂನು ಸಚಿವ ಟಿ.ಬಿ. ಜಯಚಂದ್ರ ಅವರು ಮಾತುಕತೆ ನಡೆಸಿದ್ದಾರೆ. ಅವರು ಒಪ್ಪಿದ ಕೂಡಲೇ ತ್ವರಿತ ನ್ಯಾಯಾಲಯಗಳು ಸ್ಥಾಪನೆಯಾಗುತ್ತವೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕ ಅಪರಾಧ ಹಿನ್ನೆಲೆಯುಳ್ಳವನಾಗಿದ್ದಾನೆ. ಆದ್ದರಿಂದ ಅವನ ಮೇಲೆ ಗೂಂಡಾ ಕಾಯಿದೆ ಹಾಕಲಾಗುತ್ತದೆ. ಆರೋಪಪಟ್ಟಿಯನ್ನೂ ಅತಿ ಜಾಗ್ರತೆಯಿಂದ ಹಾಕುವಂತೆ ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.