ಹೆಚ್ಚಿದ ಅತ್ಯಾಚಾರಕ್ಕೆ ಔರಾದ್ಕರ್ಗೆ ಶಿಕ್ಷೆ

ಬೆಂಗಳೂರು: ನಗರದಲ್ಲಿ ಹೆಚ್ಚಾಗುತ್ತಿರುವ ಅತ್ಯಾಚಾರ ಪ್ರಕರಣಗಳು ನಗರ ಪೊಲೀಸ್ ಆಯುಕ್ತರನ್ನು 'ಬಲಿ' ತೆಗೆದುಕೊಂಡಿದ್ದು, ನಗರದ ಐದು ಹಿರಿಯ ಐಪಿಎಸ್ ಅಧಿಕಾರಿಗಳ ಸ್ಥಾನಪಲ್ಲಟ ಮಾಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ಕಾನೂನು ಸುವ್ಯವಸ್ಥೆ, ಮಾನವ ಹಕ್ಕು ವಿಭಾಗದ ಉನ್ನತ ಸ್ಥಾನಗಳಲ್ಲಿರುವ ಐವರು ಐಪಿಎಸ್ ಅಧಿಕಾರಿಗಳು ವರ್ಗವಾಗಿದ್ದಾರೆ. ಕಾನೂನು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಎಂ.ಎನ್. ರೆಡ್ಡಿ ಅವರನ್ನು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಿಸಲಾಗಿದೆ. ರಾಘವೇಂದ್ರ ಔರಾದ್ಕರ್ ಅವರನ್ನು ಕೆಎಸ್ಆರ್ಪಿಯ ಎಡಿಜಿಪಿ ಹುದ್ದೆಗೆ ವರ್ಗಾಯಿಸಲಾಗಿದೆ. ಯುವತಿ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಇನ್ಸ್ಪೆಕ್ಟರ್ ದೂರು ದಾಖಲೆಯಲ್ಲಿ ವಿಳಂಬ ಪ್ರಕರಣದ ಸಂದರ್ಭದಲ್ಲೇ ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ವರ್ಗಾವಣೆ ಬಗ್ಗೆ ಊಹಾಪೋಹಗಳಿದ್ದವು. ಪ್ರಕರಣದ ಕಾವು ತೀವ್ರಗೊಂಡಿದ್ದರಿಂದ ಹಾಗೂ ಬಾಲಕಿ ಮೇಲಿನ ಅತ್ಯಾಚಾರವೂ ಬಹಿರಂಗ ಚರ್ಚೆಗೆ ಬಂದಿದ್ದರಿಂದ ಪೊಲೀಸ್ ಬಿಗಿಹಿಡಿತದ ಬಗ್ಗೆ ಅನುಮಾನ ವ್ಯಕ್ತವಾಯಿತು. ಇದನ್ನೆಲ್ಲ ಪರಿಗಣಿಸಿರುವ ಸರ್ಕಾರ ಐವರು ಹಿರಿಯ ಅಧಿಕಾರಿಗಳನ್ನು ವರ್ಗಾಯಿಸಿದೆ.
ಸಂಪರ್ಕ, ಆಧುನೀಕರಣ ವಿಭಾಗದ ಎಡಿಜಿಪಿ ಎಚ್.ಸಿ. ಕಿಶೋರ್ ಚಂದ್ರ ಅವರನ್ನು ಕಾನೂನು ಸುವ್ಯವಸ್ಥೆಯ ಎಡಿಜಿಪಿ ಹುದ್ದೆಗೆ ನೇಮಿಸಲಾಗಿದೆ. ಬೆಂಗಳೂರು ನಗರ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಹುದ್ದೆಯನ್ನು ಅಲೋಕ್ಕುಮಾರ್ ಅವರಿಗೆ ನೀಡಲಾಗಿದ್ದು, ಈ ಹುದ್ದೆಯಲ್ಲಿದ್ದ ಕಮಲ್ಪಂತ್ ಅವರಿಗೆ ಕುಂದುಕೊರತೆ ಮತ್ತು ಮಾನವ ಹಕ್ಕುಗಳ ಐಜಿಪಿ ಹುದ್ದೆ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


