ಪ್ರಧಾನ ಸುದ್ದಿ

ಬೀದಿಗಿಳಿದ ಬಿಜೆಪಿ ನಾಯಕರು

Published On :

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಬೀದಿಗಿಳಿದಿದ್ದು, ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ರಾಜಿನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಅತ್ಯಾಚಾರ ಪ್ರಕರಣ ಹೆಚ್ಚಳ ಹಾಗೂ ಹಿಂದುಳಿದ ವರ್ಗಗಳ ವಸತಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡದ ರಾಜ್ಯ ಸರ್ಕಾರ ಅಹಿಂದ ವರ್ಗಗಳ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿ ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ವಿಧಾನಸೌಧ ಮುತ್ತಿಗೆ ಹಾಕಲು ಪ್ರಯತ್ನ ನಡೆಸಲಾಯಿತು. ಆದರೆ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಜೆಡಿಎಸ್ ಕಚೇರಿ ಬಳಿ ಎಲ್ಲ ನಾಯಕರನ್ನು ತಡೆದು ಪೊಲೀಸ್ ವಶಕ್ಕೆ ತೆಗೆದುಕೊಳ್ಳಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವರು ರಾಜಿನಾಮೆ ನೀಡುವವರೆಗೂ ಪ್ರತಿಭಟನೆ ಕೈಬಿಡದಿರಲು ಬಿಜೆಪಿ ನಿರ್ಧರಿಸಿದೆ. ಸದನದ ಹೊರಗೆ ಹಾಗೂ ಒಳಗೆ ಸರ್ಕಾರದ ವಿರುದ್ಧ ಪ್ರತಿಭಟಿಸುವುದಾಗಿ ಬಿಜೆಪಿ ಮುಖಂಡರು ಘೋಷಿಸಿದ್ದಾರೆ.
ಪ್ರಚಾರಕ್ಕೆ ಮಾತ್ರ ಅಹಿಂದ: ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತರ ಹೆಸರು ಹೇಳಿಕೊಂಡು ಸಿದ್ದರಾಮಯ್ಯ ಅಧಿಕಾರದ ಗದ್ದುಗೆ ಏರಿದ್ದಾರೆ. ಆದರೆ ಈಗ ಕುರ್ಚಿ ಉಳಿಸಿಕೊಳ್ಳುವ ನೆಪದಲ್ಲಿ ಅಹಿಂದ ವರ್ಗವನ್ನು ಸಂಪೂರ್ಣವಾಗಿ ಮರೆತಿದ್ದಾರೆ. ಹಿಂದುಳಿದ ವರ್ಗಕ್ಕೆ ಸೇರಿದವರ 3 ಲಕ್ಷ ಮನೆಗಳಿಗೆ ಸರ್ಕಾರ ಹಣ ಪಾವತಿಸಿಲ್ಲ. ಅವರಿಗೆ ಹಕ್ಕು ಪತ್ರ ನೀಡುತ್ತಿಲ್ಲ. ಇವರನ್ನು ನಂಬಿ ಮತ ಹಾಕಿದವರು ಮಳೆಯಲ್ಲಿ ಸೂರಿಲ್ಲದೇ ನೆನೆಯಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆರೋಪಿಸಿದ್ದಾರೆ. ಇನ್ನೊಂದೆಡೆ ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣ ಹೆಚ್ಚುತ್ತಿದೆ. ಇವರಲ್ಲಿ ದಲಿತರ ಸಂಖ್ಯೆ ಹೆಚ್ಚಿದೆ. ಆದರೆ ಯಾರ ನೋವಿಗೂ ಸ್ಪಂದಿಸದ ಸರ್ಕಾರ ನಿದ್ದೆ ಮಾಡುತ್ತಿದೆ. ಬಿಜೆಪಿ ಕಾರ್ಯಕರ್ತರು ಸರ್ಕಾರವನ್ನು ಎಬ್ಬಿಸಬೇಕಿದೆ. ಅಸಮರ್ಥ ಗೃಹ ಮಂತ್ರಿಯನ್ನು ಮನೆಗೆ ಕಳುಹಿಸಬೇಕಿದೆ ಎಂದು ಕಾರ್ಯಕರ್ತರಿಗೆ ಅವರು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.