ಪ್ರಧಾನ ಸುದ್ದಿ

ಅತ್ಯಾಚಾರ: ರಾಜ್ಯದ ವರದಿ ಕೇಳಿದ ಎನ್‌ಎಚ್‌ಆರ್‌ಸಿ

Published On :

ಕನ್ನಡಪ್ರಭ ಪ್ರತಿನಿಧಿಯಿಂದ
ನವದೆಹಲಿ:
ಬೆಂಗಳೂರಿನ ವಿಬ್‌ಗ್ಯೊರ್ ಶಾಲೆಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಎಚ್‌ಆರ್‌ಸಿ) ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಹಾಗೂ ಬೆಂಗಳೂರು ಜಿಲ್ಲಾಧಿಕಾರಿಗೆ ನೋಟಿಸ್ ಜಾರಿ ಮಾಡಿದೆ. ಎರಡು ವಾರಗಳಲ್ಲಿ ಪ್ರಕರಣದ ಬಗ್ಗೆ ಸಮಗ್ರ ಮಾಹಿತಿ ಹಾಗೂ ಇಂಥ ಪ್ರಕರಣಗಳನ್ನು ನಡೆಯದಂತೆ ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡುವಂತೆಯೂ ಆಯೋಗ ತಾಕೀತು ಮಾಡಿದೆ. ಮಾಧ್ಯಮಗಳಲ್ಲಿ ಪ್ರಕಟವಾದ ವರದಿಯನ್ನಾಧರಿಸಿ ಆಯೋಗ ಸ್ವಯಂ ಕಾರ್ಯಪ್ರವೃತ್ತವಾಗಿದೆ.  ಶಾಲೆಯಲ್ಲಿ ಶಿಕ್ಷಕರೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ದೌರ್ಜನ್ಯ ಎಸಗಿದ ಶಾಲೆಯ ಸಿಬ್ಬಂದಿ ವಿರುದ್ಧ ಪೊಸ್ಕೋದಡಿ ಶಿಕ್ಷಿಸಬೇಕು ಎಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.