ಅಂತರ್ಜಲ ವೃದ್ಧಿಗೆ ರಾಜಸ್ಥಾನ ಮಾದರಿ ಸರಣಿ ಚೆಕ್ಡ್ಯಾಮ್: ಸಚಿವ ತಂಗಡಗಿ

ವಿಧಾನಪರಿಷತ್ತು: ಅಂತರ್ಜಲ ವೃದ್ಧಿಗೊಳಿಸಲು ರಾಜಸ್ಥಾನ ಮಾದರಿಯಲ್ಲಿ ಸರಣಿ ಚೆಕ್ ಡ್ಯಾಮ್ ನಿರ್ಮಿಸಲು ಸರ್ಕಾರ ಮುಂದಾಗಿದೆ ಎಂದು ಸಣ್ಣ ನೀರಾವರಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಗಣೇಶ್ ಕಾರ್ಣಿಕ್ ಪ್ರಶ್ನೆಗೆ ಉತ್ತರಿಸಿದ ಅವರು, ಕುಸಿಯುತ್ತಿರುವ ಅಂತರ್ಜಲ ಹೆಚ್ಚಿಸುವುದು ಸರ್ಕಾರದ ಕೆಲಸವಾಗಿದ್ದು, ಇದಕ್ಕೆ ಸಾರ್ವಜನಿಕರ ಸಹಕಾರವೂ ಬೇಕಿದೆ ಎಂದರು. ಅಂತರ್ಜಲ ವೃದ್ಧಿಗೊಳಿಸಬೇಕೆನ್ನುವ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ರಾಜಸ್ಥಾನದ ಅನೇಕ ಭಾಗಗಳಲ್ಲಿ ಭೇಟಿ ನೀಡಿ ಅಲ್ಲಿನ ತಂತ್ರವಿಧಾನಗಳನ್ನು ಅಧ್ಯಯನ ಮಾಡಿದ್ದಾರೆ. ಅಲ್ಲಿರುವಂತೆ ಇಲ್ಲಿಯೂ ಚೆಕ್ ಡ್ಯಾಮ್ಗಳನ್ನು ನಿರ್ಮಿಸಿ ನೀರು ಇಂಗುವಂತೆ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಇದಕ್ಕಾಗಿ ಜಿಲ್ಲೆಗೆ 5 ಕೋಟಿಯಂತೆ ಅನುದಾನ ಬೇಕಿದ್ದು, ಸದ್ಯಕ್ಕೆ ಕೋಲಾರ, ಚಿಕ್ಕಬಳ್ಳಾಪುರು, ಕೊಪ್ಪಳ, ಬಿಜಾಪುರ ಹಾಗೂ ಗದಗವನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಇದು ಯಶಸ್ವಿಯಾಗುತ್ತಿದ್ದಂತೆ ಮತ್ತೆ 5 ಜಿಲ್ಲೆಗಳನ್ನು ಆಯ್ಕೆ ಮಾಡಿಕೊಂಡು ಯೋಜನೆ ಮುಂದುವರಿಸಲಾಗುತ್ತದೆ ಎಂದು ತಂಗಡಗಿ ವಿವರಿಸಿದರು.
ಅಂತರ್ಜಲಕ್ಕೆ ಸಂಬಂಧಿಸಿದ ಸಂಸ್ಥೆ ಈತನಕ ಗಣಿ ಇಲಾಖೆಯಲ್ಲಿತ್ತು. ಈಗ ಸಣ್ಣ ನೀರಾವರಿ ಇಲಾಖೆಗೆ ಸೇರಿ ಅದಕ್ಕೊಂದು ಪ್ರಾಧಿಕಾರ ರಚಿಸಲಾಗಿದೆ. ಇತ್ತೀಚಿಗೆ ಬೋರ್ವೆಲ್ ಕೊರೆಯಲು ಅನುಮತಿ ಕೇಳಿ 8642 ಅರ್ಜಿಗಳು ಬಂದಿದ್ದು, ಅವುಗಳಲ್ಲಿ 4458ಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಇನ್ನುಳಿದ ಅರ್ಜಿಗಳನ್ನು ತಿರಸ್ಕರಿಸಲಾಗಿದ್ದು, ಈ ಮೂಲಕ ಕೂಡ ಅಂತರ್ಜಲ ರಕ್ಷಿಸಲಾಗುತ್ತಿದೆ ಎಂದು ತಂಗಡಗಿ ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


