ಪ್ರಧಾನ ಸುದ್ದಿ

ಚಿಕ್ಕೋಡಿ ಉಪ ಚುನಾವಣೆ: ಹುಕ್ಕೇರಿ ಮಗ ಅಭ್ಯರ್ಥಿ

Published On :

ಬೆಳಗಾವಿ: ಚಿಕ್ಕೋಡಿ-ಸದಲಗಾ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಸಂಸದ ಪ್ರಕಾಶ ಹುಕ್ಕೇರಿ ಅವರು ಪುತ್ರ ಗಣೇಶ ಹುಕ್ಕೇರಿ ಅವರ ಹೆಸರನ್ನು ಹೈಕಮಾಂಡ್‌ಗೆ ಸೂಚಿಸಲಾಗುವುದು ಎಂದು ಚುನಾವಣಾ ವೀಕ್ಷಕ ಮತ್ತು ಮಾಜಿ ಸಭಾಪತಿ ಬಿ.ಆರ್. ಸುದರ್ಶನ ತಿಳಿಸಿದ್ದಾರೆ.
ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಚಿಕ್ಕೋಡಿ-ಸದಲಗಾ, ಬಳ್ಳಾರಿ ಗ್ರಾಮೀಣ ಹಾಗೂ ಶಿಕಾರಿಪುರ ವಿಧಾನಸಭೆ ಮತಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಿಕ್ಕೋಡಿ-ಸದಲಗಾ ವಿಧಾನಸಭೆ ಕ್ಷೇತ್ರದಲ್ಲಿ ಅಭ್ಯರ್ಥಿಗಾಗಿ ನಾವು ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದ್ದು, ಈ ಚರ್ಚೆಯಲ್ಲಿ ಗಣೇಶ ಪ್ರಕಾಶ ಹುಕ್ಕೇರಿ ಹೆಸರನ್ನು ಸರ್ವಾನುಮತದಿಂದ ಅಂತಿಮಗೊಳಿಸಲಾಗಿದೆ. ವೀಕ್ಷಕರ ತಂಡವು ಗಣೇಶ ಹುಕ್ಕೇರಿ ಅವರಿಗೆ ಚುನಾವಣಾ 'ಬಿ' ಫಾರಂ ನೀಡುವಂತೆ ಎಐಸಿಸಿ, ಕೆಪಿಸಿಸಿ ಅಧ್ಯಕ್ಷರು ಹಾಗೂ ಸಿಎಂ ಸಿದ್ದರಾಮಯ್ಯರಿಗೆ ಶಿಫಾರಸು ಮಾಡುತ್ತೇವೆ. ಅಂತಿಮ ತೀರ್ಮಾನ ಹಾಗೂ ಘೋಷಣೆ ಪಕ್ಷದ ಹೈಕಮಾಂಡ್ ಮಾಡಲಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.