ಪ್ರಧಾನ ಸುದ್ದಿ

ಬಿಜೆಪಿ ಅಭ್ಯರ್ಥಿಗಳು

Published On :

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಕೇಂದ್ರ ಚುನಾವಣೆ ಸಮಿತಿಗೆ ಕಳುಹಿಸಲಾಗಿದೆ. ಶಿಕಾರಿಪುರದಿಂದ ಮಾಜಿ ಸಂಸದ ಬಿ.ವೈ.ರಾಘವೇಂದ್ರ, ಚಿಕ್ಕೋಡಿಯಿಂದ ವಿಧಾನ ಪರಿಷತ್ ಸದಸ್ಯ ಮಹಂತೇಶ್ ಕವಟಗಿಮಠ ಹಾಗೂ ಬಳ್ಳಾರಿ ಗ್ರಾಮಾಂತರ ಕ್ಷೇತ್ರದಿಂದ ಓಬಳೇಶ್ವರ ಹೆಸರನ್ನು ರಾಜ್ಯ ಬಿಜೆಪಿ ಶಿಫಾರಸು ಮಾಡಿದೆ. ಯಡಿಯೂರಪ್ಪ, ಪ್ರಕಾಶ್ ಹುಕ್ಕೇರಿ ಹಾಗೂ ಶ್ರೀರಾಮುಲು ಅವರಿಂದ ಈ ವಿಧಾನಸಭಾ ಕ್ಷೇತ್ರಗಳು ತೆರವಾಗಿದ್ದವು.

ಕೂಡಗಿ: ಅಮಾನತು
ಬಿಜಾಪುರ: ಕೂಡಗಿ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದ ಹಿನ್ನೆಲೆಯಲ್ಲಿ ಬಸವನ ಬಾಗೇವಾಡಿ ಸಿಪಿಐ ಚಂದ್ರಕಾಂತ ನಂದರೆಡ್ಡಿ ಮತ್ತು ಬಿಜಾಪುರ ಎಸ್ಪಿ ಕಚೇರಿಯ ಸ್ಪೆಶಲ್ ಬ್ರ್ಯಾಂಚ್ ಸಿಪಿಐ ಎಚ್.ಬಿ. ಇಂಗಳೇಶ್ವರ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಎಸ್ಪಿ ಡಾ. ರಾಮನಿವಾಸ ಸೆಪಟ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.