ಪ್ರಧಾನ ಸುದ್ದಿ

ಪುಣೆಯ ಸಮೀಪ 170 ಮಂದಿ ಭೂಸಮಾಧಿ?

ಪುಣೆಯ ಸಮೀಪ 170 ಮಂದಿ ಭೂಸಮಾಧಿ?
Published On :

ಪುಣೆ: ಮಹಾರಾಷ್ಟ್ರದ ಪುಣೆಯ ಹಳ್ಳಿಯೊಂದರಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೂಕುಸಿತ 170 ಮಂದಿಯನ್ನು ಬಲಿತೆಗೆದುಕೊಂಡಿರುವ ಸಾಧ್ಯತೆಯಿದೆ. ಗುಡ್ಡ ಕುಸಿತದಿಂದ 40 ಮನೆಗಳು ನೆಲಸಮವಾಗಿದ್ದು, 18 ಮೃತದೇಹಗಳು ಪತ್ತೆಯಾಗಿವೆ. ಇನ್ನೂ ಸುಮಾರು 150 ಮಂದಿ ಅವಶೇಷಗಳಡಿ ಸಿಲುಕಿದ್ದು, ಇವರೆಲ್ಲ ಬದುಕಿರುವ ಸಾಧ್ಯತೆ ತೀರಾ ಕಡಿಮೆ ಎಂದು ಹೇಳಲಾಗಿದೆ.

ಎಲ್ಲಿ?
ಪುಣೆ ಜಿಲ್ಲೆಯ ಅಂಬೇಗಾಂವ್ ತಾ. ಮಾಲಿನ್ ಗ್ರಾಮ

ಏನಾಯಿತು?
ಸುಮಾರು 70 ಮನೆಗಳ ಮೇಲೆ ಗುಡ್ಡ ಕುಸಿತ

ಕಾರಣ?
ಧಾರಾಕಾರ ಸುರಿದ ಮಳೆ, ಪ್ರವಾಹ

ಸಾವು ನೋವು?
ಅವಶೇಷಗಳ ಅಡಿಯಲ್ಲಿ 170 ಸಿಲುಕಿರುವ ಶಂಕೆ. 18 ಮೃತ ದೇಹ ಹೊರಕ್ಕೆ


ರಕ್ಷಣಾ ಕಾರ್ಯವೂ ಕಷ್ಟ
ಪುಣೆಯಿಂದ 120 ಕಿ.ಮೀ. ದೂರದ ಮಾಲಿನ್ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಭಾರಿ ಮಳೆಯಿಂದಾಗಿ ಬುಧವಾರ ಬೆಳಗಿನ ಜಾವ ಭೂಕುಸಿತ ಉಂಟಾಗಿ, ಗುಡ್ಡ ಕುಸಿದು ಬಿದ್ದಿದೆ. ಈ ಗುಡ್ಡದ ಕೆಳಗೆ 70 ಮನೆಗಳಿದ್ದು 200ರಷ್ಟು ಮಂದಿ ವಾಸವಿದ್ದರು ಎನ್ನಲಾಗಿದೆ. ಘಟನೆ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ರಕ್ಷಣಾ ಕಾರ್ಯಕರ್ತರು ಅವಶೇಷಗಳಡಿ ಸಿಲುಕಿದ್ದ ಐವರನ್ನು ರಕ್ಷಿಸಿದ್ದಾರೆ. ಈವರೆಗೆ 18 ಮೃತದೇಹಗಳು ಪತ್ತೆಯಾಗಿದ್ದು, ಇನ್ನೂ ಅನೇಕರು ಮೃತಪಟ್ಟಿರುವ ಶಂಕೆ ಮೂಡಿದೆ. ಈ ಗ್ರಾಮಕ್ಕೆ ತೆರಳುವ ಮಾರ್ಗಗಳೆಲ್ಲ ಕೆಸರಿನಿಂದ ಕೂಡಿದ್ದು, ಹೆಚ್ಚಿನ ರಕ್ಷಣಾ ಕಾರ್ಯಕರ್ತರು ಸ್ಥಳಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ.
ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಪರಿಸ್ಥಿತಿ ಬಗ್ಗೆ ಪರಿಶೀಲಿಸಲು ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಪುಣೆಗೆ ಕಳುಹಿಸಿದ್ದಾಗಿ ತಿಳಿಸಿದ್ದಾರೆ.

ಎಲ್ಲೆಡೆ ಭಾರಿ ಮಳೆ
ಏತನ್ಮಧ್ಯೆ ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಉತ್ತರಭಾರತದಾದ್ಯಂತ ಬುಧವಾರ ಭಾರಿ ಮಳೆಯಾಗಿದೆ. ಮಹಾರಾಷ್ಟ್ರದ ಠಾಣೆಯಲ್ಲಿ ಧಾರಾಕಾರ ಮಳೆಯಿಂದಾಗಿ 50 ಗ್ರಾಮಗಳು ಮುಳುಗಡೆಯಾಗಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.