ಹಾಲಿಗೂ ಜಾತಿ ಲೇಪ, ಯಾಕಪ್ಪ ಈ ಪಕ್ಷಪಾತ

ಬೆಂಗಳೂರು: ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೀಡುತ್ತಿರುವುದು ಒಳ್ಳೆಯದೇ, ಪರಿಶಿಷ್ಟ ಜಾತಿಯವರು ಉತ್ಪಾದನೆ ಮಾಡಿದ ಹಾಲಿಗೆ ಹೆಚ್ಚುವರಿಯಾಗಿ 2 ರು.ಸಹಾಯ ಧನ ನೀಡುವುದು ಸ್ವಾಗತಾರ್ಹ. ಆದರೆ ಉಳಿದವರು ಏನು ಪಾಪ ಮಾಡಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸರ್ಕಾರವನ್ನು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಕೊಪ್ಪಳಕ್ಕೆ ಆಗಮಿಸಿದ್ದ ಅವರು, ಪರಿಶಿಷ್ಟರಿಗೆ ಮಾತ್ರ ಹೆಚ್ಚುವರಿ 2 ಸಹಾಯಧನ ನೀಡುವ ಸರ್ಕಾರದ ಕ್ರಮವನ್ನು ಖಂಡಿಸಿದರು. ಕಾಂಗ್ರೆಸ್ ಸರ್ಕಾರದ ರಾಜ್ಯದಲ್ಲಿ ಜಾತಿಯ ವಿಷಬೀಜ ಬಿತ್ತಿ, ಸಮಾಜವನ್ನು ಛಿದ್ರ ಮಾಡುತ್ತಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಏಕತೆ ಪ್ರತಿಪಾದಿಸುತ್ತಿದ್ದರೆ, ಸಿದ್ಧರಾಮಯ್ಯ ಸರ್ಕಾರ ಸಮಾಜವನ್ನು ಒಡೆದಾಳುವ ನೀತಿ ಅನುಸರಿಸುತ್ತಿದೆ ಇದಕ್ಕೆ ಜನರೇ ಉತ್ತರ ನೀಡುತ್ತಾರೆ ಎಂದರು.
ಸಿಎಂಗೆ ಪತ್ರಬರೆಯುವೆ
ಹಾಲಿನಲ್ಲೂ ಜಾತಿ ಭೇದದ ಹುಳಿ ಹಿಂಡುವ ಪ್ರಯತ್ನಗಳನ್ನು ರಾಜ್ಯಸರ್ಕಾರ ಕೈಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ. ಗುಲ್ಬರ್ಗಕ್ಕೆ ಆಗಮಿಸಿರುವ ಯಡಿಯೂರಪ್ಪ, ಹಾಲಿಗೆ ಜಾತಿ ಹುಳಿ ಹಿಂಡುವುದು ಸರಿಯಲ್ಲ. ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ಪತ್ರ ಬರೆದು ಸಿಎಂಗೆ ತಿಳಿಸುವುದಾಗಿಯೂ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


