ದಾಖಲೆ ಒದಗಿಸಿದರೆ ತಕ್ಷಣ ಕ್ರಮ: ಸಿಎಂ

ಬೆಂಗಳೂರು: ಅಧಿಕಾರಿಗಳ ಭ್ರಷ್ಟಾಚಾರದ ಬಗ್ಗೆ ಶಾಸಕರು ಸೂಕ್ತ ದಾಖಲೆ ಒದಗಿಸಿದರೆ ತಕ್ಷಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರ ದೂರುಗಳನ್ನು ಆಲಿಸಿದ ನಂತರ ಈ ಭರವಸೆ ನೀಡಿದ್ದಾರೆ. ಇದೊಂದು ವಿಚಾರ ಹೊರತುಪಡಿಸಿದರೆ ಸಿಎಲ್ಪಿ ಸಭೆ ಸಂಪೂರ್ಣ ಕ್ಷೇತ್ರವಾರು ದೂರುದುಮ್ಮಾನದ ವೇದಿಕೆಯಾಗಿ ಪರಿಣಮಿಸಿತ್ತು.
ಸರ್ಕಾರಿ ಯೋಜನೆಗಳು ಜನರಿಗೆ ತಲುಪುತ್ತಿಲ್ಲ ಎಂಬ ಆರೋಪ ಎದುರಾಗುವುದಕ್ಕೆ ಅಧಿಕಾರಿಗಳ ಬೇಜವಾಬ್ದಾರಿತನ ಮತ್ತು ಭ್ರಷ್ಟಾಚಾರವೇ ಕಾರಣ. ಹೀಗಾಗಿ ಶಾಸಕರು ಕ್ಷೇತ್ರ ವ್ಯಾಪ್ತಿಯ ಭ್ರಷ್ಟ ಅಧಿಕಾರಿಗಳ ಬಗ್ಗೆ ದಾಖಲೆ ಸಮೇತ ಮಾಹಿತಿ ನೀಡಿದರೆ ಸರ್ಕಾರ ತಕ್ಷಣ ಶಿಸ್ತುಕ್ರಮ ತೆಗೆದುಕೊಳ್ಳುತ್ತದೆ ಎಂದರು.
ಸಚಿವರ ಮೇಲೆ ಕಿಡಿ: ನಿರೀಕ್ಷೆಯಂತೆ ಕೆಲ ಶಾಸಕರು ಸಚಿವರ ವರ್ತನೆ ವಿರುದ್ಧ ಕಡಿಕಾರಿದ್ದಾರೆ. ಸಚಿವರು ಕೈಗೆ ಸಿಗುತ್ತಿಲ್ಲ. ಇವರ ಇಂಥ ನಿರ್ಲಕ್ಷ್ಯದಿಂದ ಲೋಕಸಭೆಯಲ್ಲಿ ಶೇ.50ಕ್ಕಿಂತ ಹೆಚ್ಚು ಸಚಿವರ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂದು ಹೇಳಿದರು.
ಅಂಬಿ ವಿರುದ್ಧ ಗರಂ: ಮಂಡ್ಯ ರಾಜಕಾರಣ ಸಿಎಲ್ಪಿಯಲ್ಲಿ ಪ್ರತಿಧ್ವನಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಷ್ ವಿರುದ್ಧ ಶಾಸಕ ನರೇಂದ್ರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮಧ್ಯಪ್ರವೇಶ ಮಾಡಿದ ಸಿದ್ದರಾಮಯ್ಯ ಈ ವಿಚಾರವನ್ನು ಜಿಲ್ಲೆಯಲ್ಲಿ ನಡೆಯುವ ಸಭೆಯಲ್ಲಿ ಚರ್ಚಿಸೋಣ ಎಂದು ಸಮಾಧಾನಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


