ವಿಧಾನ ಪರಿಷತ್ನ ನಾಲ್ಕು ಸ್ಥಾನಗಳಿಗೆ ಚುನಾವಣೆ ಇಂದು

ಬೆಂಗಳೂರು: ವಿಧಾನ ಪರಿಷತ್ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಇಂದು ಮತದಾನ ನಡೆಯಲಿದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಪಶ್ಚಿಮ ಪದವೀಧರ, ಆಗ್ನೇಯ ಪದವೀಧರ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು, ಬೆಳಗ್ಗೆ 8ರಿಂದ ಸಾಯಂಕಾಲ 4 ಗಂಟೆಯವರೆಗೆ ಮತದಾನ ನಡೆಯಲಿದೆ.
ಒಟ್ಟು 2.61 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ 94356, ಆಗ್ನೇಯ ಪದವೀಧರ ಕ್ಷೇತ್ರದಲ್ಲಿ 98037, ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ 36957, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ 31809 ಮತದಾರರಿದ್ದಾರೆ. ಜೂನ್ 24ರಂದು ಮತ ಎಣಿಕೆ ನಡೆಯಲಿದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಬಿಜೆಪಿಯ ಎಂ.ನೀಲಯ್ಯ, ಕಾಂಗ್ರೆಸ್ನ ಬಿ.ಕೆ.ವೆಂಕಟೇಶ್, ಜೆಡಿಎಸ್ನ ಪುಟ್ಟಣ್ಣ, ಶಿಕ್ಷಣ ತಜ್ಞ ಗುರುರಾಜ್ ಕರಜಗಿ ಕಣದಲ್ಲಿದ್ದಾರೆ. ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಶಶೀಲ್ ನಮೋಶಿ, ಕಾಂಗ್ರೆಸ್ನ ಶರಣಪ್ಪ ಮತ್ತೂರು, ಜೆಡಿಎಸ್ನ ಮಹಾಂತಪ್ಪ, ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಸಂತನೂರು ವೀರಪ್ಪ, ಕಾಂಗ್ರೆಸ್ನ ಪಾಂಡುರಂಗ ನೀರಲಕೇರಿ, ಜೆಡಿಎಸ್ನ ವಸಂತ ಹೊರಟ್ಟಿ, ಆಗ್ನೇಯ ಪದವೀಧರ ಕ್ಷೇತ್ರದಿಂದ ಬಿಜೆಪಿಯ ಡಾ.ಎ.ಎಚ್.ಶಿವಯೋಗಿಸ್ವಾವು, ಸಿ.ಎಚ್.ಮುರುಗೇಂದ್ರಪ್ಪ, ಜೆಡಿಎಸ್ನ ಆರ್.ಚೌಡರೆಡ್ಡಿ ಕಣದಲ್ಲಿದ್ದಾರೆ.
ಅಭ್ಯರ್ಥಿಗಳಿಗೆ ಪಕ್ಷದ ಅಧಿಕೃತ ಚಿಹ್ನೆ ಇರುವುದಿಲ್ಲ. ಕ್ರಮಸಂಖ್ಯೆ ಮತ್ತು ಹೆಸರಿನ ಮುಂದೆ ಮತ ಚಲಾಯಿಸಬೇಕು. ಮೊದಲ ಆದ್ಯತೆಯ ಮತ ಕಡ್ಡಾಯವಾಗಿದ್ದು, ಈ ಮತ ಚಲಾಯಿಸದವರ ಹಕ್ಕನ್ನು ಅನರ್ಹಗೊಳಿಸಲಾಗುತ್ತದೆ. ಎಪಿಕ್ ಕಾರ್ಡ್ ಜತೆಗೆ ಆಯೋಗ ನಿಗದಿಪಡಿಸಿದ ಗುರುತಿನ ಪತ್ರ ಹೊಂದಿರುವವರಿಗೆ ಮಾತ್ರ ಮತದಾನ ಅವಕಾಶವಿದೆ. ಶಾಲಾ ಗುರುತಿನ ಪತ್ರವನ್ನು ಮತದಾನಕ್ಕೆ ಪರಿಗಣಿಸಲಾಗುವುದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


