ಕಸ್ತೂರಿ ರಂಗನ್ ವರದಿ ಜಾರಿಗೆ ಆತುರವಿಲ್ಲ: ಸಚಿವ ಪ್ರಕಾಶ್ ಜಾವಡೇಕರ್
ಕೊಲ್ಲಾಪುರ: ಪಶ್ಚಿಮ ಘಟ್ಟ ವ್ಯಾಪ್ತಿಯ ಜಿಲ್ಲೆಗಳ ಜನ ಕಸ್ತೂರಿ ರಂಗನ್ ವರದಿಯ ತೂಗುಕತ್ತಿ ವಿಚಾರದಲ್ಲಿ ಸದ್ಯಕ್ಕೆ ನಿರಾಳರಾಗಬಹುದು. ವರದಿ ಅನುಷ್ಠಾನಕ್ಕೆ ಅವಸರ ಮಾಡುವುದಿಲ್ಲ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಭಾನುವಾರ ಭರವಸೆ ನೀಡಿದ್ದಾರೆ. ವರದಿ ಜಾರಿಗೆ ನಮಗೇನೂ ಆತುರವಿಲ್ಲ. ಸಂಬಂಧಿಸಿದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೂ ಸಮಾಲೋಚನೆ ನಡೆಸಿದ ಬಳಿಕವೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಈ ವಿಚಾರದಲ್ಲಿ ಯಾರೂ ಭಯಪಡಬೇಕಾದ ಅಗತ್ಯವಿಲ್ಲ ಎಂದು ಸಚಿವರು ಆಶ್ವಾಸನೆ ನೀಡಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಮ್ಮ ನಿಲುವು ಸ್ಪಷ್ಟ. ಪರಿಸರ ಬಲಿಕೊಟ್ಟು ಅಭಿವೃದ್ಧಿ ಸಾಧಿಸಲೂ ಬಯಸುವುದಿಲ್ಲ, ಪರಿಸರ ರಕ್ಷಣೆ ನೆಪದಲ್ಲಿ ರಾಷ್ಟ್ರೀಯ ಹಿತಾಸಕ್ತಿಯ ಅಭಿವೃದ್ಧಿ ಯೋಜನೆಗಳ ಕಡತಗಳ ಮೇಲೆ ಕುಳಿತುಕೊಳ್ಳಲೂ ಇಚ್ಛಿಸುವುದಿಲ್ಲ ಎಂದರು. ಕರ್ನಾಟಕದ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಸಂಸದರಾದ ಪ್ರತಾಪಸಿಂಹ (ಕೊಡಗು-ಮೈಸೂರು), ಶೋಭಾ ಕರಂದ್ಲಾಜೆ (ಉಡುಪಿ-ಚಿಕ್ಕಮಗಳೂರು), ನಳಿನ್ಕುಮಾರ್ ಕಟೀಲ್ (ದಕ್ಷಿಣ ಕನ್ನಡ), ಅನಂತಕುಮಾರ ಹೆಗಡೆ (ಉತ್ತರ ಕನ್ನಡ) ಅವರು ಜೂ.4ರಂದು ಜಾವಡೇಕರ್ ಅವರನ್ನು ಭೇಟಿ ಮಾಡಿ ಕಸ್ತೂರಿ ರಂಗನ್ ವರದಿ ಜಾರಿಗೊಳಿಸದಂತೆ ಮನವಿ ಮಾಡಿದ್ದರು. ಅಭಿವೃದ್ಧಿ ಕೆಲಸಗಳಿಗೆ ಈ ವರದಿಯೇ ಅಡ್ಡಿಯಾಗಲಿದೆ ಎನ್ನುವುದನ್ನೂ ಮನವರಿಕೆ ಮಾಡಿಕೊಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

