ಪ್ರಧಾನ ಸುದ್ದಿ

15 ದಿನದಲ್ಲಿ ಮಳೆ ಬರದಿದ್ದರೆ ವಿದ್ಯುತ್ ಸಮಸ್ಯೆ ತೀವ್ರ: ಡಿಕೆಶಿ

Published On :

ಬೆಂಗಳೂರು: ರಾಜ್ಯದಲ್ಲಿ ಜನರಿಗೆ ವಿದ್ಯುತ್ ಸರಬರಾಜು ಆಗಬೇಕಾದರೆ ಆ ದೇವರೇ ಕಾಪಾಡಬೇಕು. ಇನ್ನು 15 ದಿನದಲ್ಲಿ ಮಳೆ ಬರದಿದ್ದರೆ ವಿದ್ಯುತ್ ಸಮಸ್ಯೆ ತೀವ್ರಗೊಳ್ಳಲಿದೆ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಎಚ್ಚರಿಸಿದ್ದಾರೆ.
ವಿದ್ಯುತ್ ಉತ್ಪಾದನೆಗೆ ಮಳೆ ಬರಲೇಬೇಕು. ಇದಕ್ಕಿರುವ ಒಂದೇ ಪರಿಹಾರ ಎಂದರೆ ಎಲ್ಲರೂ ಪಕ್ಷಾತೀತವಾಗಿ ದೇವರನ್ನು ಮಳೆಗಾಗಿ ಪ್ರಾರ್ಥನೆ ಮಾಡುವುದು. ವಿದ್ಯುತ್‌ಗೆ ನಮ್ಮನ್ನು ಆ ದೇವರೇ ಕಾಪಾಡಬೇಕು ಎಂದು ಸುದ್ದಿಗಾರರಿಗೆ ಭಾನುವಾರ ತಿಳಿಸಿದರು.
ಮಳೆಯಿಲ್ಲದೆ ಜಲವಿದ್ಯುತ್ ಕೇಂದ್ರಗಳಲ್ಲಿ ವಿದ್ಯುತ್ ಉತ್ಪಾದನೆಯ ಅಭಾವ ಉಂಟಾಗಿದೆ. ಇದರ ಪರಿಣಾಮವಾಗಿ ಇಡೀ ರಾಜ್ಯದ ಜನತೆಗೆ, ಅದರಲ್ಲೂ ಬೆಂಗಳೂರು ನಾಗರಿಕರಿಗೆ ವಿದ್ಯುತ್ ಸರಬರಾಜು ಮಾಡುವುದು ಕಷ್ಟಕರವಾಗಲಿದೆ ಎಂದು ಹೇಳಿದರು.
ಕೋಲಾರದಂತಹ ಬಯಲು ಪ್ರದೇಶಗಳಲ್ಲಿ ಮಳೆಯಿಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ವಿದ್ಯುತ್ ಹಾಗೂ
ರಾಜ್ಯದ ಜನರ ಸಮಸ್ಯೆ ನಿವಾರಣೆಗೆ ಮಳೆಯೊಂದೇ ಪರಿಹಾರ. ಆ ಭಗವಂತನ ಕೃಪೆ ನಮ್ಮ ಮೇಲೆ ಆಗಲಿ ಎಂದು ಪ್ರಾರ್ಥಿಸಿದರು.
'ರಾಜಿನಾಮೆ ಪಡೆಯುವುದು ಸಿಎಂಗೆ ಬಿಟ್ಟ ವಿಚಾರ'
ಮೈಸೂರು
: ಜಿಲ್ಲಾ ಉಸ್ತುವಾರಿ ಸಚಿವ ತಲೆದಂಡ ವಿಷಯದಲ್ಲಿ ಯಾರಿಂದ ರಾಜಿನಾಮೆ ಪಡೆಯಬೇಕು, ಬಿಡಬೇಕು ಎಂಬುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು ಎಂದು ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.  ಸಾಧನೆ ತೋರದ ಸಚಿವರನ್ನು ಸಂಪುಟದಿಂದ ಕೈಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಈ ಪ್ರತಿಕ್ರಿಯೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಸಿಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ಕಲ್ಪಿಸುವುದು ಹೈಕಮಾಂಡ್‌ಗೆ ಬಿಟ್ಟ ವಿಷಯ. ಈ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.