ಪ್ರಧಾನ ಸುದ್ದಿ

ನಾಮನಿರ್ದೇಶನ: ಸಿಎಂ ಶಿಫಾರಸು ಪ್ರಶ್ನಿಸಿ ಪಿಐಎಲ್

Published On :

ಬೆಂಗಳೂರು: ವಿಧಾನ ಪರಿಷತ್ ನಾಮನಿರ್ದೇಶನಕ್ಕೆ ಮುಖ್ಯಮಂತ್ರಿಗಳ ಶಿಫಾರಸು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿ ಪರಿಗಣಿಸುವಂತೆ ರಿಜಿಸ್ಟ್ರಾರ್ ಜನರಲ್‌ಗೆ ಹೈಕೋರ್ಟ್‌ನ ನ್ಯಾ.ಅಶೋಕ್ ಬಿ. ಹಿಂಚಿಗೇರಿ ನಿರ್ದೇಶಿಸಿದ್ದಾರೆ.
ಸಂವಿಧಾನದ ಕಲಂ 171(5)ರ ಪ್ರಕಾರ ಸಾಹಿತ್ಯ, ಕಲೆ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ರಾಜಕೀಯೇತರ ವ್ಯಕ್ತಿಗಳನ್ನು ನಾಮನಿರ್ದೇಶನ ಮಾಡಬಹುದಾಗಿದೆ. ರಾಜ್ಯಪಾಲರಿಗೆ ಸ್ವತಂತ್ರವಾಗಿ ನಾಮನಿರ್ದೇಶನ ಮಾಡುವ ಅಧಿಕಾರವಿದೆ. ಆದರೆ ಮುಖ್ಯಮಂತ್ರಿ ರಾಜಕೀಯ ವ್ಯಕ್ತಿಗಳ ನಾಮನಿರ್ದೇಶನ ಮಾಡುವ ಮೂಲಕ ಸಂವಿಧಾನ ಆಶಯಕ್ಕೆ ಧಕ್ಕೆ ತರಲಾಗಿದೆ ಎಂದು ಆರ್ಜಿಯಲ್ಲಿ ದೂರಲಾಗಿದೆ.ಈ ಸಂಸ್ಕೃತಿಗೆ ತಡೆ ನೀಡುವ ಮೂಲಕ ಈ ಬಾರಿ ಪರಿಷತ್ ಸ್ಥಾನಕ್ಕೆ ಸಿಎಂ ಸೂಚಿಸುವ ಹೆಸರು ಅಂಗೀಕರಿಸದೆ ರಾಜ್ಯಪಾಲರು ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಮನವಿ ಸಲ್ಲಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.