ಪ್ರಧಾನ ಸುದ್ದಿ

ಸರ್ಕಾರ ನಿಮ್ಮದೇ ಅಲ್ಲವೇನ್ರಿ, ಏನು ಕ್ರಮ ತೆಗೆದುಕೊಂಡಿದ್ದೀರಿ?

ಸರ್ಕಾರ ನಿಮ್ಮದೇ ಅಲ್ಲವೇನ್ರಿ, ಏನು ಕ್ರಮ ತೆಗೆದುಕೊಂಡಿದ್ದೀರಿ?
Published On :

ವಿಧಾನಸಭೆ: ಟಿಇಟಿ ಪ್ರಶ್ನೆ ಪತ್ರಿಕೆ ಬಯಲು ಪ್ರಕರಣದಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಂಡಿಲ್ಲದ ಬಗ್ಗೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರನ್ನು ತರಾಟೆಗೆ ತೆಗೆದುಕೊಂಡರು.
ಪ್ರಶ್ನೆಪತ್ರಿಕೆ ಬಯಲು ಪ್ರಕರಣದಲ್ಲಿ ಒಬ್ಬನೇ ಆರೋಪಿ ಸಿಕ್ಕಿಹಾಕಿಕೊಳ್ಳುತ್ತಿದ್ದರೂ ಇದು ಇಲಾಖೆಗೆ ಸಂಬಂಧಿಸಿದ್ದಲ್ಲ. ಖಜಾನೆ ಇಲಾಖೆ ಶಿಕ್ಷಣ ಇಲಾಖೆಗೆ ಬರುವುದಿಲ್ಲ. ಅಲ್ಲಿಂದ ಪ್ರಶ್ನೆಗೆ ಲೀಕ್ ಆಗಿದೆ ಎಂದು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸ್ಪೀಕರ್ ಕಾಗೋಡು ತಿಮ್ಮಪ್ಪ, ಸರ್ಕಾರ ಅಂದರೆ ನೀವೇ ಅಲ್ಲವೇನ್ರೀ. ಅದು ಬರಲ್ಲ, ಇದು ಬರಲ್ಲ ಎಂದು ಹೇಳೋದು ಸರಿಯಲ್ಲ. ನೀವು ಏನು ಕ್ರಮ ಕೈಗೊಂಡಿದ್ದೀರಿ ಹೇಳ್ರೀ. ಏನೂ ಕ್ರಮ ಕೈಗೊಂಡಿಲ್ರೀ ನೀವು. ಸರಿಯಾಗಿ ಕ್ರಮ ಕೈಗೊಳ್ಳಿ ಎಂದು ತಾಕೀತು ಮಾಡಿದರು. ಶೂನ್ಯವೇಳೆಯಲ್ಲಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಷಯ ಪ್ರಸ್ತಾಪಿಸಿ, ಟಿಇಟಿ ಪ್ರಶ್ನೆ ಪತ್ರಿಕೆ ಬಹಿರಂಗಗೊಂಡಿರುವುದರಿಂದ ಎಲ್ಲರೂ ಆತಂಕದಲ್ಲಿದ್ದಾರೆ. ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇಲಾಖೆಯಿಂದ ವಿಚಾರಣೆ ನಡೆಯುತ್ತಿದೆ. ಆರೋಪಿ ಶಿವಕುಮಾರ್ ಈಗ ಶಿಕ್ಷಕನಲ್ಲ. ಅವನ ಮೇಲೆ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಆದ್ದರಿಂದ ನಮ್ಮ ಇಲಾಖೆ ಪಾತ್ರ ಇಲ್ಲ ಎಂದು ಸಚಿವ ಕಿಮ್ಮನೆ ರತ್ನಾಕರ ಹೇಳಿದಾಗ, ಕಾಗೋಡು ತಿಮ್ಮಪ್ಪ ಅಸಮಾಧಾನಗೊಂಡು ತರಾಟೆಗೆ ತೆಗೆದುಕೊಂಡರು.
ಶಿಕ್ಷಣ ಇಲಾಖೆಯಲ್ಲಿ ಸಂಪರ್ಕ ಹೊಂದಿರುವ ಆರೋಪಿ ಶಿವಕುಮಾರ್ ಸಹಜ ಸೆಕ್ಷನ್ ಮೇಲೆ ಕೇಸ್ ದಾಖಲು ಬೇಡ. ಗೂಂಡಾ ಕಾಯಿದೆಯಂತಹ ಸೆಕ್ಷನ್ ಹಾಕಬೇಕು. ಗೃಹ ಸಚಿವರು ಇಲ್ಲೇ ಇರುವುದರಿಂದ ಆ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ಸೂಚಿಸಬೇಕು ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದರು. ಆದರೆ, ಗೃಹ ಸಚಿವ ಟಿ.ಜೆ. ಜಾರ್ಜ್ ಮುಗುಳುನಗೆ ಬೀರಿದರಷ್ಟೇ. ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.