ಆ.30ರೊಳಗೆ ನಿಗಮ, ಮಂಡಳಿಗಳಿಗೆ ನೇಮಕ

ಬೆಂಗಳೂರು: ಕಾಂಗ್ರೆಸ್ ಪ್ರತಿನಿಧಿಗಳ ಸಮಾವೇಶದಲ್ಲಿ ಕಾರ್ಯಕರ್ತರ ಬೇಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊನೆಗೂ ಮಣಿದಿದ್ದು, ಆ.30ರೊಳಗೆ ನಿಗಮ-ಮಂಡಳಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷರನ್ನು ನೇಮಕ ಮಾಡುವುದಾಗಿ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ಪ್ರತಿನಿಧಿಗಳ ಸಮಾವೇಶದ ಎರಡನೇ ದಿನವಾದ ಭಾನುವಾರ ಸಭೆಯಲ್ಲಿ ಪಾಲ್ಗೊಂಡಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.
ನಿಗಮ-ಮಂಡಳಿ ನೇಮಕಕ್ಕೆ ಸಂಬಂಧಿಸಿದಂತೆ ಸಮಾವೇಶದಲ್ಲಿ ಸಾಕಷ್ಟು ಚರ್ಚೆ ನಡೆದಿದೆ. ನೇಮಕಕ್ಕೆ ಕಾರ್ಯಕರ್ತರು, ಮುಖಂಡರು ಒಕ್ಕೂರಲ ಧ್ವನಿಯಲ್ಲಿ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆ.30 ರೊಳಗೆ ಅಧ್ಯಕ್ಷ,ಉಪಾಧ್ಯಕ್ಷರನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದರು.
ಸಮಾವೇಶದಲ್ಲಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಪಕ್ಷದ ಕಾರ್ಯಕಾರಿ ಸಮಿತಿಯನ್ನು ಆಗ್ರಹಿಸಿದರು.
ಕಾಂಗ್ರೆಸ್ ಕಾರ್ಯಕರ್ತರು ಹತಾಶರಾಗಬೇಕಿಲ್ಲ. ಸರ್ಕಾರ ಐದು ಪೂರ್ಣಗೊಳಿಸುತ್ತೆ. ನಾನು ಇರುತ್ತೇನೋ ಇಲ್ಲವೋ, ನನ್ನ ಸರ್ಕಾರದ ಅವದಿಯಲ್ಲಿ ಕಾರ್ಯಕರ್ತರ ಪ್ರತಿಯೊಂದು ಅಹವಾಲುಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ. ಭಯಪಡಬೇಡಿ, ಪಕ್ಷ ಸಂಘಟನೆಗೆ ದುಡಿಯಿರಿ ಎಂದು ಮನವಿ ಮಾಡಿದರು.
ಸೋನಿಯಾ ಗಾಂಧಿಯವರು ಕೊಟ್ಟ ಜವಾಬ್ದಾರಿಗಳನ್ನು ನಾವು ನಿಭಾಯಿಸಬೇಕಿದೆ. ಈ ಐದು ವರ್ಷಗಳು ಮಾತ್ರವಲ್ಲ ಮುಂದಿನ ಅವದಿಗೂ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು ಶ್ರಮಿಸೋಣ ಎಂದರು.
ರಾಹುಲ್ ಬೇಡ
ಬೆಂಗಳೂರು: ರಾಹುಲ್‌ಗಾಂಧಿ ಅವರ ನಾಯಕತ್ವದ ಬಗ್ಗೆ ಸಾಕಷ್ಟು ಪ್ರಶ್ನೆಗಳಿವೆ. ಆದ್ದರಿಂದ ಪ್ರಿಯಾಂಕಗಾಂಧಿ ಅವರನ್ನು ಬಿಂಬಿಸಬೇಕು... ಮಾಜಿ ಸಂಸದ ಎಚ್. ವಿಶ್ವನಾಥ್‌ರ ಮಾತು ಕಾಂಗ್ರೆಸ್ ಸಮಾವೇಶದಲ್ಲಿ ಭಾರಿ ಚರ್ಚೆ, ಚಕಮಕಿಗೆ ಕಾರಣವಾಯಿತು.
ಕೈ ಪಾದಯಾತ್ರೆ
ಬೆಂಗಳೂರು: ಸೋಲಿನ ಅವಲೋಕನದ ಮೂಲಕ ಪಕ್ಷ ಸಂಘಟನೆಗೆ ಮುಂದಾಗಿರುವ ಕಾಂಗ್ರೆಸ್ ರಾಜ್ಯದಲ್ಲಿ ಪಾದಯಾತ್ರೆ ಮಾಡಲು ನಿರ್ಧರಿಸಿದೆ. 224 ವಿಧಾನಸಭೆ ಕ್ಷೇತ್ರದಲ್ಲೂ ಪಾದಯಾತ್ರೆ ನಡೆಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


