ಐಎಎಸ್ ಅಧಿಕಾರಿ ಸೋಮಶೇಖರ್ ನಿವೃತ್ತಿ

ಬೆಂಗಳೂರು: ರಾಜ್ಯದ ಹಿರಿಯ ಐಎಎಸ್ ಅಧಿಕಾರಿ, ಸಹಕಾರ ಇಲಾಖೆ ಕಾರ್ಯದರ್ಶಿ ಡಾ.ಸಿ. ಸೋಮಶೇಖರ್ ಸೋಮವಾರ ಸೇವೆಯಿಂದ ನಿವೃತ್ತರಾಗಲಿದ್ದಾರೆ.
ಸರ್ಕಾರಿ ಸೇವೆ ಜತೆಗೆ ಸಾಹಿತ್ಯ, ಸಮಾಜ ಸೇವೆ ಮತ್ತು ಸಾಂಸ್ಕೃತಿಕ ವಲಯದಲ್ಲಿ ಗುರುತಿಸಿಕೊಂಡಿದ್ದ ಡಾ. ಸೋಮಶೇಖರ್ ಅಧಿಕಾರಿಗಳ ವಲಯದಲ್ಲಿ ಅಜಾತಶತ್ರು ಎಂದು ಹೆಸರಾಗಿದ್ದರು. 1980ರಲ್ಲೇ ಲೋಕಸೇವಾ ಆಯೋಗದ ಪರೀಕ್ಷೆಯನ್ನು ಪ್ರಥಮ ಬಾರಿ ಕನ್ನಡದಲ್ಲಿ ಬರೆದು ಆಯ್ಕೆಯಾದ ಕೀರ್ತಿ ಸೋಮಶೇಖರ್ ಅವರಿಗೆ ಸಲ್ಲುತ್ತದೆ. ಕೇಂದ್ರದ ಪ್ರಥಮ ದರ್ಜೆ ಹುದ್ದೆ ನಿರಾಕರಿಸಿದ ಅವರು ನಾಡು ನುಡಿ ಮೇಲಿನ ಅಭಿಮಾನಕ್ಕಾಗಿ ಕೇಂದ್ರದ ಹುದ್ದೆ ನಿರಾಕರಿಸಿದ್ದರು.
1954ರ ಆಗಸ್ಟ್ 9ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ಜನಿಸಿದರು. ಬಿ.ಕಾಂ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಸೋಮಶೇಖರ್, ಬೆಂಗಳೂರು ವಿವಿಯಲ್ಲಿ ಕಾಮರ್ಸ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದರು. ಕಾಲೇಜು ಜೀವನದಲ್ಲಿ ಪ್ರಬಂಧ, ಚರ್ಚಾ ಸ್ಪರ್ಧೆ, ನೂರಾರು ಭಾಷಣ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದಾರೆ. 1975ರಲ್ಲಿ ಬೆಂಗಳೂರು ಕೆಎಲ್ಇ ಸೊಸೈಟಿ ಎಸ್.ನಿಜಲಿಂಗಪ್ಪ ಕಾಲೇಜಿನಲ್ಲಿ ವಾಣಿಜ್ಯ ಅಧ್ಯಾಪಕರಾಗಿ ವೃತ್ತಿ ಆರಂಭಿಸಿದರು.
1982ರಲ್ಲಿ ಕರ್ನಾಟಕ ಆಡಳಿತ ಸೇವೆ ಪ್ರಥಮ ದರ್ಜೆ ಸೇವೆಗೆ ಸಹಾಯಕ ಕಮಿಷನರ್ ಆಗಿ ಸೇರ್ಪಡೆಯಾದರು.
2013ರಲ್ಲಿ ಐಎಎಸ್ ಹುದ್ದೆಯಲ್ಲಿ ಕರ್ನಾಟಕ ಕಾರ್ಯದರ್ಶಿ ಹುದ್ದೆಗೆ ಬಡ್ತಿ. ನಂತರ ಕರ್ನಾಟಕ ಯುವಜನ ಸೇವೆ ಇಲಾಖೆಯಲ್ಲಿ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಹಾಗೂ ಸಹಕಾರ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.
ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳು: ಬಸವಶ್ರೀ ಪ್ರಶಸ್ತಿ, ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾಗಿದ್ದ ಸೋಮಶೇಖರ್, ನೂರಾರು ಪ್ರಶಸ್ತಿಗಳನ್ನು ಗಳಿಸಿದ್ದಾರೆ.
ಅಮೆರಿಕದ ಡೆಟ್ರಾಯಿಟ್ನಲ್ಲಿ ನಡೆದ ವಿಶ್ವ 'ಅಕ್ಕ' ಕನ್ನಡ ಸಮ್ಮೇಳನದಲ್ಲಿ ಅತಿಥಿಯಾಗಿ ಸಾಹಿತ್ಯ ಸಮ್ಮೇಳನ ಉದ್ಘಾಟನೆ. ಲಂಡನ್, ಚೀನಾ, ಲ್ಯಾಟ್ವಿಯಾ ದೇಶಗಳಲ್ಲಿ ಐಎಪ್ಡಬ್ಲ್ಯೂಎ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಲಂಡನ್ನಲ್ಲಿ ನಡೆದ ವಿಶ್ವ ಪ್ರವಾಸೋದ್ಯದ ಸಮ್ಮೇಳನ, ದುಬೈನಲ್ಲಿ ನಡೆದ ಕನ್ನಡ ಸಮ್ಮೇಳನ, ಅಮೆರಿಕದ ಬೋಸ್ಟನ್ನಲ್ಲಿ ನಡೆದ ವಿಶ್ವ ಬಸವ ಸಮ್ಮೇಳನದಲ್ಲಿ ವಿಶೇಷ ಉಪನ್ಯಾಸ ನೀಡಿದ್ದರು. ಡಾ.ಸಿ. ಸೋಮಶೇಖರ್ ಅವರ ಮುತ್ತಿನಹಾರ ಹೆಸರಿನ ಅಭಿನಂದನಾ ಗ್ರಂಥ ಬಿಡುಗಡೆ ಮಾಡಲಾಗಿದೆ.
ಹಲವೆಡೆ ಸಾರ್ಥಕ ಸೇವೆ...
ಧಾರವಾಡದಲ್ಲಿ ಸಹಾಯಕ ಕಮಿಷನರ್ ತರಬೇತಿ ಪಡೆದು ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಯಲ್ಲಿ ಉಪನಿರ್ದೇಶಕರಾಗಿ ಸೇವೆ. ನಂತರ ಮಂಗಳೂರು ಉಪವಿಭಾಗಾಧಿಕಾರಿಯಾಗಿ ಕೆಲಸ, ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ಆಡಳಿತಾಧಿಕಾರಿ, ಕರ್ನಾಟಕ ಗೃಹ ಮಂಡಳಿ ಕಾರ್ಯದರ್ಶಿ, ಬೆಂಗಳೂರು ನಗರ ಜಿಲ್ಲೆ ವಿಶೇಷ ಜಿಲ್ಲಾಧಿಕಾರಿ, ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯಲ್ಲಿ ಕಾರ್ಯದರ್ಶಿ, ಬೆಂಗಳೂರು ನಗರ ವಿಶೇಷ ಜಿಲ್ಲಾಧಿಕಾರಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ, ಕನ್ನಡ ಮತ್ತುಸಂಸ್ಕೃತಿ ಇಲಾಖೆ ನಿರ್ದೇಶಕ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. 2007ರಲ್ಲಿ ಭಾರತೀಯ ಆಡಳಿತ ಸೇವೆಗೆ ಸೇರ್ಪಡೆಯಾದ ಸೋಮಶೇಖರ್, ಕರ್ನಾಟರ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾಗಿ, ತುಮಕೂರು ಜಿಲ್ಲಾಧಿಕಾರಿ, ಕರ್ನಾಟಕ ರಾಜ್ಯ ಕೃಷಿ ಮಾರುಕಟ್ಟೆ ಇಲಾಖೆ ನಿರ್ದೇಶಕ, ಅಬಕಾರಿ ಇಲಾಖೆ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


