ಪ್ರಧಾನ ಸುದ್ದಿ

ಜೂನ್‌ನಲ್ಲಿ ದೇಶಾದ್ಯಂತ ಶೇ. 42ರಷ್ಟು ಮಳೆ ಅಭಾವ

Published On :

ನವದೆಹಲಿ: ಜೂನ್ ತಿಂಗಳು ಮುಗಿದರೂ ಇನ್ನೂ ವರುಣ ಕೃಪೆ ತೋರದಿರುವುದು ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಜೂನ್ ತಿಂಗಳಲ್ಲಿ ದೇಶಾದ್ಯಂತ ಸರಾಸರಿ ಶೇ.42ರಷ್ಟು ಮಳೆಯ ಅಭಾವ ಉಂಟಾಗಿದೆ. ಈ ಅವಧಿಯಲ್ಲಿ ಕರ್ನಾಟಕದಲ್ಲಿ ಉಂಟಾದ ಅಭಾವ ಶೇ.35. ಕಳೆದ 113 ವರ್ಷಗಳಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಮಳೆಯ ಕೊರತೆ ಕಾಡಿರುವುದು ಇದು 12ನೇ ಬಾರಿ ಎಂದು ಖಾಸಗಿ ಹವಾಮಾನ ಮುನ್ಸೂಚನಾ ಸಂಸ್ಥೆ ಸ್ಕೈಮೆಟ್ ತಿಳಿಸಿದೆ.
ಸ್ವಲ್ಪ ನಿರಾಳತೆ: ಮಳೆಯಿಲ್ಲದೇ ಬರಗಾಲದ ಭೀತಿ ಎದುರಿಸುತ್ತಿರುವ ದೇಶಕ್ಕೆ ಜುಲೈ ಮೊದಲ ವಾರದಲ್ಲಿ ಸ್ವಲ್ಪವಾದರೂ ನಿರಾಳತೆ ಸಿಗುವ ನಿರೀಕ್ಷೆಯಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಕಾಣುತ್ತಿದ್ದು, ಇದರ ಪರಿಣಾಮ ಪಶ್ಚಿಮ ಕರಾವಳಿಯುದ್ದಕ್ಕೂ ಜು.1ರಿಂದ ಮಳೆ ಆರಂಭವಾಗುವ ಸಾಧ್ಯತೆಯಿದೆ ಎಂದೂ ಸ್ಕೈಮೆಟ್ ಹೇಳಿದೆ. ರಾಷ್ಟ್ರ ರಾಜಧಾನಿ ಮತ್ತು ವಾಯವ್ಯ ಪ್ರದೇಶದಲ್ಲಿ ಜು.5ರಿಂದ ಮಳೆ ಶುರುವಾಗುವ ಸಾಧ್ಯತೆಯಿದೆ. ಇದೇ ವೇಳೆ, ಒಡಿಶಾ ಮತ್ತು ಆಂಧ್ರಪ್ರದೇಶದ ಕರಾವಳಿಯಲ್ಲಿ ಸುಳಿಗಾಳಿ ಎದ್ದಿದೆ. ಹೀಗಾಗಿ ಒಡಿಶಾ, ಆಂಧ್ರ, ತೆಲಂಗಾಣದಲ್ಲಿ ಭಾರಿ ಮಳೆಯಾಗಲಿದೆ ಎಂದೂ ಸಂಸ್ಥೆ ಮಾಹಿತಿ ನೀಡಿದೆ.  ಗುಜರಾತ್ ಮತ್ತು ರಾಜಸ್ಥಾನದಂತಹ ರಾಜ್ಯಗಳು ಈ ಬಾರಿ ಶೇ.80ಕ್ಕಿಂತಲೂ ಹೆಚ್ಚು ಮಳೆಯ ಅಭಾವ ಎದುರಿಸುತ್ತಿವೆ. ಗುಜರಾತ್‌ನಲ್ಲಿ ತೀವ್ರ ಒಣ ಹವೆ ಮುಂದುವರಿದಿದ್ದು, ಪರಿಸ್ಥಿತಿ ದುಸ್ತರ ಎನಿಸಿದೆ.

ಹವಾಮಾನ ಇಲಾಖೆ ಹೇಳುವುದೇನು?
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಜೂ.1ರಿಂದ 18ರ ಅವಧಿಯಲ್ಲಿ ದೇಶಾದ್ಯಂತ ನಿರೀಕ್ಷೆಗಿಂತ ಶೇ.45ರಷ್ಟು ಕಡಿಮೆ ಮಳೆಯಾಗಿದೆ. ವಾಡಿಕೆಯಂತೆ ಈ ಅವಧಿಯಲ್ಲಿ 78.8 ಮಿ.ಮೀ. ಮಳೆಯಾಗಬೇಕಿತ್ತು. ಆದರೆ ಆಗಿದ್ದು ಕೇವಲ 43.3 ಮಿ.ಮೀ. ವಾಯವ್ಯ ಭಾರತದಲ್ಲಿ 25.0 ಮಿ.ಮೀ., ಮಧ್ಯ ಭಾರತದಲ್ಲಿ ಶೇ.51.4 ಮಿ.ಮೀ. ಮಳೆಯಷ್ಟೇ ಆಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.