ರಾಹುಲ್ ಬೇಡ, ಪ್ರಿಯಾಂಕ ಬರ್ಲಿ
ಬೆಂಗಳೂರು: ರಾಹುಲ್ಗಾಂಧಿ ಅವರ ನಾಯಕತ್ವದ ಬಗ್ಗೆ ಸಾಕಷ್ಟು ಪ್ರಶ್ನೆಗಳಿವೆ. ಅವರನ್ನು ರಾಷ್ಟ್ರದ ಜನತೆ ಒಪ್ಪಿಲ್ಲ. ಆದ್ದರಿಂದ ಪ್ರಿಯಾಂಕಗಾಂಧಿ ಅವರನ್ನು ಬಿಂಬಿಸಬೇಕು... ಮಾಜಿ ಸಂಸದ ಎಚ್. ವಿಶ್ವನಾಥ್ ಹೇಳಿದ ಈ ಮಾತು ಕಾಂಗ್ರೆಸ್ ಸಮಾವೇಶದಲ್ಲಿ ಭಾರಿ ಚರ್ಚೆ, ಮಾತಿನ ಚಕಮಕಿಗೆ ಕಾರಣವಾಯಿತು. ಏನಾದರೂ ವಿಶ್ವನಾಥ್ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನಾಯಕತ್ವದ ಕುರಿತು ಮಾಜಿ ಸಂಸದ ಎಚ್.ವಿಶ್ವನಾಥ್ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ರಿಜ್ವಾನ್ ಅರ್ಷದ್ ನಡುವೆ ಕಾಂಗ್ರೆಸ್ ಪ್ರತಿನಿಧಿಗಳ ಸಮಾವೇಶದಲ್ಲಿಮಾತಿನ ಚಕಮಕಿ ನಡೆಯಿತು. ಭಾನುವಾರ ಸಮಾವೇಶದಲ್ಲಿ ಮಾತನಾಡಿದ ಎಚ್.ವಿಶ್ವನಾಥ್, ರಾಹುಲ್ ಗಾಂಧಿ ಅವರನ್ನು ರಾಷ್ಟ್ರದ ಜನತೆ ಒಪ್ಪಿಲ್ಲ. ಈಗಲೂ ಅವರ ನಾಯಕತ್ವದ ಬಗ್ಗೆ ಪ್ರಶ್ನೆಗಳಿವೆ. ಹೀಗಾಗಿ ಪ್ರಿಯಾಂಕಾ ಗಾಂಧಿ ಅವರನ್ನು ಮುಖ್ಯವಾಹಿನಿಗೆ ತರುವ ಬಗ್ಗೆ ಚಿಂತನೆ ನಡೆಸಬೇಕಿದೆ ಎಂದು ಅಭಿಪ್ರಾಯಪಟ್ಟರು.
ವಿಶ್ವನಾಥ್ ಅವರ ಈ ಹೇಳಿಕೆ ಸಮಾವೇಶದಲ್ಲಿ ತಲ್ಲಣ ಎಬ್ಬಿಸಿತು. ಗುಸು ಗುಸು ಮಾತು ಶುರುವಾಗಿ ಗದ್ದಲ ಏರ್ಪಟ್ಟಾಗ ತಕ್ಷಣವೇ ಯುವ ಕಾಂಗ್ರೆಸ್ ಅಧ್ಯಕ್ಷ ರಿಜ್ವಾನ್ ಅರ್ಷದ್ ಎದ್ದು ನಿಂತು ವಿಶ್ವನಾಥ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು. ರಾಹುಲ್ ಗಾಂಧಿ ನಮ್ಮ ಜನ ನಾಯಕರು. ಅವರ ಬಗ್ಗೆ ಕಾರ್ಯಕರ್ತರ ಸಭೆಯಲ್ಲಿ ಬೇಕಾಬಿಟ್ಟಿಯಾಗಿ ಮಾತನಾಡಿದರೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ವಿಶ್ವನಾಥ್ 'ನಾನು ತಪ್ಪು ಸಂದೇಶ ರವಾನೆಯಾಗುವಂತೆ ಏನನ್ನು ಹೇಳಿಲ್ಲ' ಎಂದು ಸಮಜಾಯಿಷಿ ನೀಡಿದರು. ಈ ಹಂತದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು. ಇತರೆ ಹಿರಿಯ ಮುಖಂಡರ ಮಧ್ಯಸ್ಥಿಕೆ ಮೂಲಕ ತಿಳಿಯಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

