ಬೇಡ ಬೇಡ ಅಂದ್ರೂ ಕರ್ದು ದನ ಕಾಯೋ ಕೆಲ್ಸ ಕೊಟ್ಟವ್ರೆ!
ಕನ್ನಡಪ್ರಭ ವಾರ್ತೆ ಚಿಕ್ಕನಾಯಕನಹಳ್ಳಿ ಮಾ.1
ಬೇಡ ಬೇಡ ಅಂದ್ರೂ ಕರ್ದು ಕೆಲಸಕ್ಕೆ ಬಾರದ ದನ ಕಾಯೋ ಕೆಲ್ಸ ಕೊಟ್ರು...!
ಇದು ಕಾನೂನು, ಸಂಸದೀಯ ವ್ಯವಹಾರ ಮತ್ತು ಪಶುಸಂಗೋಪನಾ ಸಚಿವ ಡಿ.ಬಿ. ಜಯಚಂದ್ರ ಅವರ ಅತೃಪ್ತಿ. ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ನಲ್ಲಿ ಅಪಸ್ವರದ ಅಲೆ ಎದ್ದಿದೆ. 'ಖಾತೆಗಾಗಿ ಕ್ಯಾತೆ' ತಣ್ಣಗಾದ ಬೆನ್ನಲ್ಲೇ ಜಯಚಂದ್ರ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನನಗೆ ಸಚಿವ ಸ್ಥಾನ ದೊರೆಯದಿದ್ದರೂ ಬೇಸರವಾಗುತ್ತಿರಲಿಲ್ಲ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದನ ಕಾಯುವ ಖಾತೆಯನ್ನು ನನ್ನ ತಲೆಗೆ ಬಲವಂತವಾಗಿ ಕಟ್ಟಿದ್ದಾರೆ. ವಿಧಿಯಿಲ್ಲದೆ ಪಶು ಸಂಗೋಪನಾ ಖಾತೆಯನ್ನು ಒಪ್ಪಿಕೊಂಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಅತೃಪ್ತಿ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ಮುದ್ದೇನಹಳ್ಳಿಯಲ್ಲಿ ಪಶು ಚಿಕಿತ್ಸಾಲಯ ಕಟ್ಟಡದ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ನನಗೆ ಪಶು ಸಂಗೋಪನಾ ಖಾತೆ ವಹಿಸಿಕೊಳ್ಳಲು ಇಷ್ಟವಿರಲಿಲ್ಲ. ಖಾತೆ ಹಂಚಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನಗೆ ಪಶು ಸಂಗೋಪನಾ ಖಾತೆ ವಹಿಸಿಕೊಳ್ಳುವಂತೆ ಒತ್ತಾಯ ಮಾಡಿದರು. ಸಚಿವ ಸ್ಥಾನ ಕೊಡದಿದ್ದರೂ ಪರವಾಗಿಲ್ಲ. ನನಗೆ ದನ ಕಾಯುವ ಕೆಲಸ ಮಾತ್ರ ಕೊಡಬೇಡಿ ಎಂದು ವಿನಂತಿಸಿಕೊಂಡೆ. ಆದರೂ ಕೇಳಲಿಲ್ಲ. ಒತ್ತಾಯ ಪೂರ್ವಕವಾಗಿ ನನ್ನ ತಲೆಗೆ ಕಟ್ಟಿದರು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

