ಕೈನಲ್ಲಿ ಅಭ್ಯರ್ಥಿಗಳ ಕೊರತೆ; ಚಿದು, ತಿವಾರಿ, ಜಯಂತಿಗೆ ಬೇಡ್ವಂತೆ ಟಿಕೆಟ್

ನವದೆಹಲಿ: ಪ್ರತಿ ಬಾರಿ ಟಿಕೆಟ್ಗಾಗಿ ಗುದ್ದಾಡುತ್ತಿದ್ದ ಕಾಂಗ್ರೆಸ್ ಹಿರಿಯ ಮುಖಂಡರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ. ಅದರ ಬದಲು ರಾಜ್ಯಸಭೆ ಮೂಲಕ ಆಯ್ಕೆಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಸೂಚನೆಯ ಹೊರತಾಗಿಯೂ ಹಿರಿಯ ಮುಖಂಡರು ಸ್ಪರ್ಧೆಯಿಂದ ಹಿಂದೆ ಸರಿಯುತ್ತಿರುವುದು ಲೋಕಸಭೆ ಅಭ್ಯರ್ಥಿಗಳ ಎರಡನೇ ಪಟ್ಟಿ ಸಿದ್ಧಪಡಿಸುತ್ತಿರುವ ಕಾಂಗ್ರೆಸ್ಗೆ ತಲೆನೋವಾಗಿ ಪರಿಣಮಿಸಿದೆ.
ನೋ ಎನ್ನುತ್ತಿರುವ ತಿವಾರಿ: ಲುಧಿಯಾನಾ ಕ್ಷೇತ್ರವನ್ನು ಪ್ರತಿನಿಧಿಸುವ ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವ ಮನೀಷ್ ತಿವಾರಿ ಕೂಡ ಈ ಬಾರಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಸ್ಪರ್ಧೆಯಿಂದ ಹಿಂದೆ ಸರಿಯಲು ಕಾರಣ ನೀಡದಿದ್ದರೂ ಅವರು ರಾಜ್ಯಸಭೆ ಮೂಲಕ ಲೋಕಸಭೆಗೆ ಆಯ್ಕೆಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಶಿವಗಂಗಾ ಕ್ಷೇತ್ರ ಪ್ರತಿನಿಧಿಸುವ ಪಿ. ಚಿದಂಬರಂ ಕೂಡ ಈ ಬಾರಿ ತಮ್ಮ ಪುತ್ರ ಕಾರ್ತಿ ಕಣಕ್ಕಿಳಿಸಲು ಆಸಕ್ತಿ ತೋರುತ್ತಿದ್ದಾರೆ. ತ.ನಾಡು ಕಾಂಗ್ರೆಸ್ ಆಯ್ಕೆ ಸಮಿತಿ ಜಯಂತಿ ನಟರಾಜನ್ರನ್ನು ಸ್ಪರ್ಧಿಸುವಂತೆ ಕೇಳಿಕೊಂಡಿತ್ತು. ಜಯಂತಿ ಸ್ಪರ್ಧೆಗೆ ನಿರಾಕರಿಸಿದ್ದಾರೆ.
ಬನ್ಸಲ್ಗೆ ಟಿಕೆಟ್
ರೇಲ್ವೆ ನೇಮಕಾತಿ ಹಗರಣದ ಹಿನ್ನೆಲೆಯಲ್ಲಿ ರೇಲ್ವೆ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಪವನ್ ಕುಮಾರ್ ಬನ್ಸಲ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವ ಸಾಧ್ಯತೆ ಇದೆ. ಬನ್ಸಲ್ರನ್ನು ಕಳಂಕಿತ ಎಂದು ಕರೆಯುವುದು ಸರಿಯಲ್ಲ. ಅವರ ವಿರುದ್ಧ ಈವರೆಗೆ ಯಾವುದೇ ಚಾರ್ಜ್ಶೀಟ್ ಹಾಕಿಲ್ಲ ಎಂದು ಹೇಳಿದೆ. ಈ ಮೂಲಕ ಅವರಿಗೆ ಚಂಡೀಗಡದಿಂದ ಮತ್ತೆ ಟಿಕೆಟ್ ನೀಡುವ ಸುಳಿವು ನೀಡಿದೆ. ಕಾಂಗ್ರೆಸ್ ಕೇಂದ್ರೀಯ ಚುನಾವಣಾ ಸಮಿತಿ ಈಗಾಗಲೇ ಚಂಡೀಗಡದಿಂದ ಬನ್ಸಲ್ ಹೆಸರನ್ನು ಅಂತಿಮಗೊಳಿಸಿದೆ. ಆದರೆ, ಉದ್ದೇಶಪೂರ್ವಕವಾಗಿ ಪಕ್ಷದ ಮೊದಲಪಟ್ಟಿಯಿಂದ ಬನ್ಸಲ್ ಹೆಸರನ್ನು ಹೊರಗಿಡಲಾಗಿದೆ. ಲೋಕಸಭೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಗುರುವಾರ ಪ್ರಕಟಿಸಲಿದ್ದು, ಅದರಲ್ಲಿ ಬನ್ಸಲ್ ಹೆಸರಿರುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


