ರಾಜ್ಯದ ನಾಲ್ಕು ಕಡೆ ನಮೋ ರ್ಯಾಲಿ
ಬೆಂಗಳೂರು: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರಮೋದಿ ರಾಜ್ಯದಲ್ಲಿ ಇನ್ನು ನಾಲ್ಕು ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ. ಮಾ.31 ಅಥವಾ ಏ.1ರಂದು ಮೈಸೂರು, ಶಿವಮೊಗ್ಗ, ಬಾಗಲಕೋಟೆ ಹಾಗೂ ಬೆಳಗಾವಿಯಲ್ಲಿ ಪ್ರತ್ಯೇಕ ಸಮಾವೇಶ ನಡೆಸುವ ಸಾಧ್ಯತೆಯಿದೆ. ವಾರಾಂತ್ಯದೊಳಗೆ ನಿರ್ದಿಷ್ಟ ಸ್ಥಳ ಹಾಗೂ ದಿನವನ್ನು ರಾಜ್ಯ ಬಿಜೆಪಿ ಪ್ರಕಟಿಸಲಿದೆ. ಮೂಲಗಳ ಪ್ರಕಾರ ಮೈಸೂರು ಹಾಗೂ ಬಾಗಲಕೋಟೆಯಲ್ಲಿ ಪ್ರಚಾರ ಸಭೆ ನಡೆಸುವುದು ಖಾತ್ರಿಯಾಗಿದೆ. ಆದರೆ ಉಳಿದೆರಡು ಲೋಕಸಭಾ ಕ್ಷೇತ್ರಗಳಲ್ಲಿ ಸಮಾವೇಶ ನಡೆಸುವ ಬಗ್ಗೆ ಇನ್ನು ಅಂತಿಮ ನಿರ್ಧಾರ ಹೊರ ಬರಬೇಕಿದೆ. ರಾಜ್ಯ ಘಟಕವು ಈ ನಾಲ್ಕು ಕ್ಷೇತ್ರಗಳಲ್ಲಿ ನಡೆಯುವ ಸಮಾವೇಶದಲ್ಲಿ ಭಾಗವಹಿಸುವಂತೆ ಮನವಿ ಮಾಡಿದೆ. ಒಂದೇ ದಿನ ನಾಲ್ಕು ಪ್ರದೇಶದಲ್ಲಿ ಸಮಾವೇಶ ನಡೆಯುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಗುರುವಾರ ಚಾಯ್ ಪೇ ಚರ್ಚಾ ಕಾರ್ಯಕ್ರಮ ನಡೆಯುತ್ತಿದೆ. ಕೃಷಿ ಕ್ಷೇತ್ರದ ಸಮಸ್ಯೆ ಹಾಗೂ ಸವಾಲುಗಳ ಕುರಿತಂತೆ ಮೋದಿ ಕಾರ್ಯಕರ್ತರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ರಾಜ್ಯದಲ್ಲಿ 107 ಹಾಗೂ ಬೆಂಗಳೂರು ನಗರದ 20 ಕೇಂದ್ರಗಳಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಬಿಜೆಪಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

