ನಮ್ಮ ಕುಟುಂಬ ರಾಜಕಾರಣಕ್ಕೆ ಬರುವುದು ಅಪರಾಧವೇ?

ಚಿತ್ರದುರ್ಗ: 'ನಾನು ಯಾರ ಆರೋಪಗಳಿಗೂ ಪ್ರತಿಕ್ರಿಯಿಸುವುದಿಲ್ಲ. ಪ್ರತಿಕ್ರಿಯಿಸುವ ಅವಶ್ಯಕತೆಯೂ ಇಲ್ಲ' ಎಂದು ನಟ ಶಿವರಾಜ್ ಕುಮಾರ್ ಹೇಳಿದರು. ನಗರದ ತುರುವನೂರು ರಸ್ತೆಯ ವೆಂಕಟರಮಣ ಸ್ವಾಮಿ ದೇವಸ್ಥಾನಕ್ಕೆ ಪತ್ನಿ, ಶಿವಮೊಗ್ಗ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಗೀತಾ ಜತೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದರು.
'ನನ್ನ ಪತ್ನಿ ಪರ ಪ್ರಚಾರ ಮಾಡುತ್ತೇನೆ. ಚಿಕ್ಕಚಿಕ್ಕ ವಿಷಯಗಳನ್ನೇಗೆ ದೊಡ್ಡದು ಮಾಡುತ್ತೀರಿ' ಎಂದು ಪ್ರಶ್ನಿಸಿದ ಅವರು, ನಮ್ಮ ತಂದೆ ರಾಜಕೀಯದಿಂದ ದೂರ ಉಳಿದಿದ್ದರು. ಆದರೆ, ಮಕ್ಕಳ ಬೆಳವಣಿಗೆಗಳು, ಆಯ್ಕೆಗಳಿಗೆ ಅಡ್ಡಿಯಾಗಿರಲಿಲ್ಲ. ಏಕೆ, ನಮ್ಮ ಕುಟುಂಬ ರಾಜಕಾರಣಕ್ಕೆ ಬರುವುದು ಅಪರಾಧವೇ ಎಂದು ಪತ್ರಕರ್ತರನ್ನೇ ಪ್ರಶ್ನಿಸಿದರು. 'ಗೀತಾ 22 ವರ್ಷಗಳಿಂದ ಸಂಗಾತಿಯಾಗಿದ್ದಾರೆ. ನನ್ನ ನೋವು- ನಲಿವುಗಳಿಗೆ ಸ್ಪಂದಿಸಿದ್ದಾರೆ. ನಾನು ಅವರ ಪರವಾಗಿ ಪ್ರಚಾರ ಮಾಡುತ್ತೇನೆ' ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


