ಕಾಂಗ್ರೆಸ್ಗೆ ಷರೀಫ್ ರಾಜಿನಾಮೆ?

ಬೆಂಗಳೂರು: ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ಹಿರಿಯ ಮುಖಂಡ ಸಿ.ಕೆ. ಜಾಫರ್ ಷರೀಫ್ ರಾಜಿನಾಮೆ ನೀಡಿದ್ದಾರೆಯೇ?
ಇಂಥದೊಂದು ಪ್ರಶ್ನೆ ಮಂಗಳವಾರ ದಿನವಿಡೀ ಚರ್ಚೆಗೆ ಕಾರಣವಾಗಿದೆ. ಟಿಕೆಟ್ ಸಿಗದೇ ಇರುವ ಕಾರಣಕ್ಕೆ ಬೇಸತ್ತು ಸದ್ಯಕ್ಕೆ ಮೆಕ್ಕಾ ಯಾತ್ರೆಗೆ ತೆರಳಿರುವ ಷರೀಫ್, ಇ- ಮೇಲ್ ಮೂಲಕ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ರಾಜಿನಾಮೆ ಪತ್ರ ಕಳುಹಿಸಿದ್ದು, ಸಕ್ರಿಯ ರಾಜಕಾರಣದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ ಎಂಬ ಸುದ್ದಿ ಕಾಂಗ್ರೆಸ್ ವಲಯದಲ್ಲಿ ತೀವ್ರ ಸದ್ದು ಮೂಡಿಸಿದೆ.
ಆದರೆ ಇದನ್ನು ಖಚಿತಪಡಿಸುವುದಕ್ಕಾಗಲಿ, ನಿರಾಕರಿಸುವುದಕ್ಕಾಗಲಿ ಕಾಂಗ್ರೆಸ್ನ ಯಾವುದೇ ನಾಯಕರು ಸಿದ್ಧರಿಲ್ಲ. ಜತೆಗೆ ಜಾಫರ್ ಷರೀಫ್ ಬೆಂಬಲಿಗರೆಲ್ಲರೂ ತಮ್ಮ ಮೊಬೈಲ್ ಅನ್ನು ಸ್ವಿಚ್ ಆಫ್ ಮಾಡಿಕೊಂಡಿರುವುದು ಈ ಎಲ್ಲ ವದಂತಿಗಳಿಗೆ ಇನ್ನಷ್ಟು ರೆಕ್ಕೆಪುಕ್ಕ ಮೂಡಿಸಿದೆ.
ಆದರೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಮಾತ್ರ ಜಾಫರ್ ಷರೀಫ್ ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದು ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ಮಾಜಿ ಶಾಸಕ ಬಿ.ಪಿ. ಹರೀಶ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಷರೀಫ್ ಪಕ್ಷದ ನಿಷ್ಠಾವಂತ ನಾಯಕರು. ಅವರು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದು ಹೇಳಿದರು.
ಬಿ ಫಾರ್ಮ್ ವಾಪಾಸ್: ಈ ನಡುವೆ ಜಾಫರ್ ಷರೀಫ್ ಅವರು ಜೆಡಿಎಸ್ನಿಂದ ಪಡೆದಿದ್ದ ಬಿ ಫಾರ್ಮ್ನ್ನು ತಮ್ಮ ಬೆಂಬಲಿಗರ ರಿಂದ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ. ದೇವೇಗೌಡ ಅವರಿಗೆ ಫ್ಯಾಕ್ಸ್ ಮೂಲಕ ವಾಪಸ್ ಕಳುಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


