ಗಲಭೆಗೆ ಅಖಿಲೇಶ್ ಸರ್ಕಾರ ಹೊಣೆ
ನವದೆಹಲಿ: ಮುಜಾಫರ್‌ನಗರ ಕೋಮುಗಲಭೆಗೆ ಅಖಿಲೇಶ್ ಯಾದವ್ ಸರ್ಕಾರವೇ ಕಾರಣವೆಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ಗಲಭೆಗೆ ಸಂಬಂಧಿಸಿ ಸಿಬಿಐ ಅಥವಾ ಎಸ್‌ಐಟಿ (ವಿಶೇಷ ತನಿಖಾ ತಂಡ) ತನಿಖೆಗೆ ನಿರ್ದೇಶನ ನೀಡಬೇಕೆನ್ನುವ ಆಗ್ರಹವನ್ನು ನ್ಯಾಯಾಲಯ ತಳ್ಳಿಹಾಕಿದೆ. ಮುಜಾಫರ್‌ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೆ ಕೋಮುಗಲಭೆ ಹರಡದಂತೆ ತಡೆಯುವಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದೆ. ಆದರೆ, ಗಲಭೆಗೆ ಸಂಬಂಧಿಸಿದ ತನಿಖೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಸಿಬಿಐ ಅಥವಾ ಎಸ್‌ಐಟಿ ತನಿಖೆ ಅಗತ್ಯ ಇಲ್ಲ ಎಂಬ ಅಭಿಪ್ರಾಯಕ್ಕೆ ನ್ಯಾಯಾಲಯ ಬಂದಿದೆ. ಮುಜಾಫರ್‌ನಗರ ಗಲಭೆಗೆ ಸಂಬಂಧಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಾಲಯ ಈ ವಿಚಾರ ತಿಳಿಸಿದೆ. ಇದೇ ವೇಳೆ ಗಲಭೆಯಲ್ಲಿ ಸ್ಥಳಾಂತರಗೊಂಡವರು ಮತ್ತು ನಿರಾಶ್ರಿತರಿಗೆ ನ್ಯಾಯ ಒದಗಿಸಿಕೊಡಬೇಕು, ಅತ್ಯಾಚಾರಕ್ಕೊಳಗಾದ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದೂ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಪ್ರತಿಪಕ್ಷಗಳ ಆಗ್ರಹ: ಮುಜಾಫರ್‌ನಗರ ಗಲಭೆ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಸಮಾಜವಾದಿ ಪಕ್ಷದ ವಿರುದ್ಧ ಪ್ರತಿಪಕ್ಷಗಳು ಟೀಕಾಪ್ರಹಾರ ನಡೆಸಿವೆ. ಗಲಭೆ ನಿಯಂತ್ರಿಸಲು ವಿಫಲವಾದ ಸರ್ಕಾರ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಬಿಜೆಪಿ, ಬಿಎಸ್ಪಿ ಆಗ್ರಹಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

