ಪ್ರಧಾನ ಸುದ್ದಿ

ಗಲಭೆಗೆ ಅಖಿಲೇಶ್ ಹೊಣೆ

Published On :

ನವದೆಹಲಿ: ಮುಜಾಫರ್ನಗರ ಕೋಮುಗಲಭೆಗೆ ಅಖಿಲೇಶ್ ಯಾದವ್ ಸರ್ಕಾರವೇ ಕಾರಣವೆಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಗಲಭೆಗೆ ಸಂಬಂಧಿಸಿ ಸಿಬಿಐ ಅಥವಾ ಎಸ್ಐಟಿ  ತನಿಖೆಗೆ ನಿರ್ದೇಶನ ನೀಡಬೇಕೆನ್ನುವ ಆಗ್ರಹವನ್ನು ಕೋರ್ಟ್ ತಳ್ಳಿಹಾಕಿದೆ.
ಮುಜಾಫರ್ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೆ ಕೋಮುಗಲಭೆ ಹರಡದಂತೆ ತಡೆಯುವಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದೆ. ಆದರೆ, ಗಲಭೆಗೆ ಸಂಬಂಧಿಸಿದ ತನಿಖೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಸಿಬಿಐ ಅಥವಾ ಎಸ್ಐಟಿ ತನಿಖೆ ಅಗತ್ಯ ಇಲ್ಲ ಎಂಬ ಅಭಿಪ್ರಾಯಕ್ಕೆ ನ್ಯಾಯಾಲಯ ಬಂದಿದೆ. ಗಲಭೆಗೆ ಸಂಬಂಧಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಾಲಯ ಈ ವಿಚಾರ ತಿಳಿಸಿದೆ. ಇದೇ ವೇಳೆ ಗಲಭೆ ನಿರಾಶ್ರಿತರಿಗೆ  ನ್ಯಾಯ ಒದಗಿಸಿಕೊಡಬೇಕು, ಅತ್ಯಾಚಾರಕ್ಕೊಳಗಾದ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದೂ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.