ಬರ ಇರುವಾಗ ವಿದೇಶ ಪ್ರವಾಸ ಸರಿಯಲ್ಲ

ಕನ್ನಡಪ್ರಭ ವಾರ್ತೆ ಬೆಂಗಳೂರು ಮೇ 1
ರಾಜ್ಯದಲ್ಲಿ ಬರ ಹಾಗೂ ಕುಡಿಯುವ ನೀರಿನ ಸಮಸ್ಯೆ ಇರುವಾಗ ವಿದೇಶ ಪ್ರವಾಸಕ್ಕೆ ತೆರಳುವುದು ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಶಾಸಕರಿಗೆ ಕಿವಿ ಮಾತು ಹೇಳಿದ್ದಾರೆ.
84ನೇ ವರ್ಷಕ್ಕೆ ಕಾಲಿಟ್ಟ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಅಭಿನಂದನೆ ಸಲ್ಲಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು ಗುರುವಾರ ಈ ವಿಷಯ ತಿಳಿಸಿದರು. ವಿದೇಶ ಪ್ರವಾಸಕ್ಕೆ ತೆರಳುವುದು ಬೇಡ ಎಂದು ನಮ್ಮ ಪಕ್ಷದ ಶಾಸಕರಿಗೆ ಕಟ್ಟಪ್ಪಣೆ ನೀಡಿದ್ದೇನೆ. ಪ್ರವಾಸಕ್ಕೆ ಅನುಮತಿ ನೀಡಬೇಡಿ ಎಂದು ವಿಧಾನಸಭಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸಭಾಪತಿಗಳಿಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಹಾಗೂ ನಾನು ಬಿಜೆಪಿಗೆ ಬೆಂಬಲ ನೀಡಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಹೇಳಿಕೆ ನೀಡಿರುವುದು ಬೇಜವಾಬ್ದಾರಿತನದ ಪರಮಾವಧಿ. ಜವಾಬ್ದಾರಿಯುತವಾಗಿ ವರ್ತಿಸುವುದನ್ನು ಅವರು ಕಲಿತುಕೊಳ್ಳಲಿ ಎಂದು ಹೇಳಿದರು.
ಸಿಎಂ ಜತೆ ಚರ್ಚೆ: ವಿಧಾನಸಭೆಯಿಂದ ಹಾಗೂ ವಿಧಾನ ಪರಿಷತ್ಗೆ ನಡೆಯುವ ಚುನಾವಣೆ ಹಾಗೂ ವಿಧಾನ ಪರಿಷತ್ಗೆ ನಾಮನಿರ್ದೇಶನ ಮಾಡುವ ಪ್ರಕ್ರಿಯೆ ಸದ್ಯದಲ್ಲೇ ಆರಂಭಗೊಳ್ಳುತ್ತದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಕುಳಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದರು. ಶಾಸಕ ತನ್ವೀರ್ ಸೇಠ್ ಜತೆಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


