ಪ್ರಧಾನ ಸುದ್ದಿ

2794 ಹುದ್ದೆಗೆ 2.45 ಲಕ್ಷ ಅರ್ಜಿ

Published On :

ಬೆಳಗಾವಿ: ರಾಜ್ಯದಲ್ಲಿ ಖಾಲಿ ಇರುವ 2794 ಪೊಲೀಸ್ ಪೇದೆಗಳ ಹುದ್ದೆ ಭರ್ತಿ ಸಂದರ್ಶನಕ್ಕಾಗಿ ಸಲ್ಲಿಕೆಯಾಗಿರುವ ಅರ್ಜಿಗಳ ಸಂಖ್ಯೆ ಬರೋಬ್ಬರಿ 2.45 ಲಕ್ಷ. ಅಂದರೆ ಒಂದು ಹುದ್ದೆಗಾಗಿ ಸರಾಸರಿ 100 ಜನರು ಸ್ಪರ್ಧೆಯಲ್ಲಿದ್ದಾರೆ.
ರಾಜ್ಯದ 25 ಜಿಲ್ಲಾ ಕೇಂದ್ರಗಳಲ್ಲಿ ಮೇ 7 ರಿಂದ ಈ ಅರ್ಜಿದಾರರ ದೈಹಿಕ ಪರೀಕ್ಷೆ ನಡೆಯಲಿದೆ.
ಇದರಲ್ಲಿ ತೇರ್ಗಡೆಯಾದವರು ಮುಂದೆ ಲಿಖಿತ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ. 2236 ಪುರುಷ ಪೊಲೀಸ್ ಪೇದೆ ಹಾಗೂ 558 ಮಹಿಳಾ ಸಿಬ್ಬಂದಿ ನೇಮಕಾತಿಗಾಗಿ ಈ ಸಂದರ್ಶನ ನಡೆಯುತ್ತಲಿದೆ. ರಾಜ್ಯದ ಪೊಲೀಸ್ ಇಲಾಖೆ ಇತಿಹಾಸದಲ್ಲೇ ಪೇದೆ ಹುದ್ದೆ ಸಂದರ್ಶನಕ್ಕೆ ಇಷ್ಟೊಂದು ಪ್ರಮಾಣದಲ್ಲಿ ಅರ್ಜಿಗಳನ್ನು ಗುಜರಾಯಿಸಲಾಗಿದೆ. ಪ್ರತಿ ಜಿಲ್ಲಾ ಕೇಂದ್ರದಲ್ಲಿ ದೈಹಿಕ, ಲಿಖಿತ ಪರೀಕ್ಷೆ ನಡೆಯುತ್ತಿದ್ದರೂ ಇಷ್ಟೊಂದು ಪ್ರಮಾಣದ ಅಭ್ಯರ್ಥಿಗಳ ಪರೀಕ್ಷೆ ಹೇಗೆ ನಡೆಸುವುದು ಎಂಬುದು ಪೊಲೀಸ್‌ರಿಗೆ ತಲೆನೋವಾಗಿದೆ. ಪ್ರತಿ ಜಿಲ್ಲಾ ಕೇಂದ್ರದಲ್ಲಿ ಪ್ರತಿ ದಿನ ಕನಿಷ್ಠ 500 ಅಭ್ಯರ್ಥಿಗಳ ದೈಹಿಕ ಪರೀಕ್ಷೆ ನಡೆಸಬೇಕೆಂದು ಪೊಲೀಸ್ ಇಲಾಖೆ ನಿರ್ಧರಿಸಿದೆ. ಅಂದರೆ ದೈಹಿಕ ಪರೀಕ್ಷೆ ಮುಗಿಯಲು ಒಂದು ತಿಂಗಳು ಬೇಕಾಗುತ್ತದೆ. ಈ ಮಧ್ಯೆ ಚುನಾವಣೆ ಮತಗಳ ಏಣಿಕೆ ಇರುವುದರಿಂದ 13 ರಿಂದ 18ರ ವರೆಗೆ ನೇಮಕಾತಿ ಪ್ರಕ್ರಿಯೆ ಇಲ್ಲ.
ಪೊಲೀಸ್‌ರ ಕೊರತೆ: ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಪೊಲೀಸ್ ಪೇದೆಗಳ ಕೊರತೆ ಇದೆ. ಜನಸಂಖ್ಯೆ ಬೆಳೆದಂತೆ ಪೊಲೀಸ್‌ರ ಸಂಖ್ಯೆ ಹೆಚ್ಚಿಸಲಾಗುತ್ತಿಲ್ಲ. ಹೊಸ ಹೊಸ ಪೊಲೀಸ್ ಠಾಣೆ ಸ್ಥಾಪಿಸಿದರೂ ಇದ್ದ ಸಿಬ್ಬಂದಿಯೇ ಹಂಚಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ ಕೊರತೆ ಎದುರಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳುತ್ತಾರೆ. ಪೊಲೀಸ್ ಸಿಬ್ಬಂದಿ ಕೊರತೆಯಿಂದ ಇದ್ದ ಸಿಬ್ಬಂದಿ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಓವರ್ ಟೈಮ್, ಡಬಲ್ ಡ್ಯೂಟಿ ಮಾಡಿ ಒತ್ತಡಕ್ಕೆ ಸಿಲುಕುತ್ತಾರೆ. ಆದ್ದರಿಂದ ಹೆಚ್ಚಿನ ಸಂಖ್ಯೆಯ ಪೊಲೀಸ್‌ರ ನೇಮಕಾತಿ ಅಗತ್ಯವಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.