ಹಿರಿಯ ಅಧಿಕಾರಿಗಳ ವಿರುದ್ಧ ತನಿಖೆಗೆ ಪೂರ್ವಾನುಮತಿ ಬೇಕಿಲ್ಲ

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಜಂಟಿ ಕಾರ್ಯದರ್ಶಿ ಮತ್ತು ಮೇಲ್ಪಟ್ಟದ ಅಧಿಕಾರಿಗಳ ವಿರುದ್ಧ ತನಿಖೆಗೆ ಸಿಬಿಐಗೆ ಸಂಬಂಧಿಸಿದ ಪ್ರಾಧಿಕಾರದ ಪೂರ್ವಾನುಮತಿ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಐತಿಹಾಸಿಕ ತೀರ್ಪು ನೀಡಿದೆ.
ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸುವ ಮುನ್ನ ಪ್ರಾಧಿಕಾರದ ಅನುಮತಿ ಕಡ್ಡಾಯ ಎನ್ನುವ ಸಿಬಿಐ ಕಾಯ್ದೆ, ದೆಹಲಿ ಪೊಲೀಸ್ ಕಾಯ್ದೆಯ ಸೆಕ್ಷನ್ '6ಎ'ಗಳನ್ನು ಪೀಠ ರದ್ದುಪಡಿಸಿದೆ. ಭ್ರಷ್ಟಾಚಾರ ಆರೋಪಗಳ ತನಿಖೆ ನಡೆಸಲು ಹೆಚ್ಚಿನ ಅಧಿಕಾರ ಬೇಕು ಎನ್ನುವ ಸಿಬಿಐನ ಬೇಡಿಕೆ ಈ ತೀರ್ಪಿನಿಂದ ಆಂಶಿಕವಾಗಿ ಈಡೇರಿದಂತಾಗಿದೆ.
'ಭ್ರಷ್ಟ ಭ್ರಷ್ಟನೇ. ಉನ್ನತ, ಕಿರಿಯ ಎಂದು ಭೇದ ಮಾಡುವಂತಿಲ್ಲ' ಎಂದು ಮುಖ್ಯ ನ್ಯಾಯಮೂರ್ತಿ ಆರ್.ಎಂ.ಲೋಧಾ ಅವರನ್ನು ಒಳಗೊಂಡ ಐವರು ನ್ಯಾಯಮೂರ್ತಿಗಳಿದ್ದ ಸಾಂವಿಧಾನಿಕ ಪೀಠ ಅಭಿಪ್ರಾಯಪಟ್ಟಿದೆ.
ಅನುದಾನಿತ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಇನ್ನು ಇಲ್ಲ ಕಡ್ಡಾಯ
ದೇಶಾದ್ಯಂತ ಜಾರಿಯಲ್ಲಿರುವ ಶಿಕ್ಷಣ ಹಕ್ಕು ಕಾಯಿದೆಗೆ (ಆರ್ಟಿಇ) ಸಾಂವಿಧಾನಿಕ ಮಹತ್ವ ಇದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಮತ್ತೊಂದು ಐತಿಹಾಸಿಕ ತೀರ್ಪು ನೀಡಿದೆ. ಆದರೆ ಈ ಕಾಯಿದೆ ಭಾಷಾ ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ಅನುದಾನಿತ ಮತ್ತು ಅನುದಾನ ರಹಿತ ಶೈಕ್ಷಣಿಕ ಸಂಸ್ಥೆಗಳಿಗೆ ಈ ನಿಯಮ ಅನ್ವಯವಾಗುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಆರ್.ಎಂ.ಲೋಧಾ ನೇತೃತ್ವದ ಸಾಂವಿಧಾನಿಕ ಪೀಠ ಅಭಿಪ್ರಾಯಪಟ್ಟಿದೆ.
ಶಿಕ್ಷಣ ಹಕ್ಕು ಕಾಯಿದೆ ಭಾಷಾ ಮತ್ತು ಧಾರ್ಮಿಕ ಅಲ್ಪಸಂಖ್ಯಾತರು ನಡೆಸುವ ಶಿಕ್ಷಣ ಸಂಸ್ಥೆಗಳಿಗೆ ಅನ್ವಯ ಆಗುವುದಿಲ್ಲ ಎನ್ನುವುದು ಫೇಡರೇಷನ್ ಆಫ್ ಪಬ್ಲಿಕ್ ಸ್ಕೂಲ್ ಎಂಬ ಒಕ್ಕೂಟ ವಾದಿಸುತ್ತಿದೆ. ಅದರಲ್ಲಿ ಸುಮಾರು 350ಕ್ಕೂ ಹೆಚ್ಚು ಶಾಲೆಗಳಿವೆ.
ಕೋರ್ಟ್ ಹೇಳಿದ್ದೇನು?
* ಕಾಯಿದೆಗೆ ಸಾಂವಿಧಾನಿಕ ಮಹತ್ವ ಇದೆ.
* ಕಾಯಿದೆ ಅಲ್ಪಸಂಖ್ಯಾತರ ಅನುದಾನಿತ, ರಹಿತ ಶಿಕ್ಷಣ ಸಂಸ್ಥೆಗೆ ಅನ್ವಯವಾಗದು.
ಒಕ್ಕೂಟದ ವಾದ ಏನು?
* ಶಿಕ್ಷಣ ಸಂಸ್ಥೆ ನಡೆಸುವ ಹಕ್ಕನ್ನು ಸರ್ಕಾರ ಕಸಿದಂತಾಗುತ್ತದೆ.
* ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಹಸ್ತಕ್ಷೇಪ ನಡೆಸಬಾರದು ಎಂದು 2012ರಲ್ಲೇ ತೀರ್ಪಿದೆ. ಆದರೆ ಕೋರ್ಟ್ ಗಣನೆಗೆ ತೆಗೆದುಕೊಂಡಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


