ಪ್ರಧಾನ ಸುದ್ದಿ

ವಿಮಾನ ನಿಲ್ದಾಣಗಳೇ ಉಗ್ರರ ಗುರಿ

ವಿಮಾನ ನಿಲ್ದಾಣಗಳೇ ಉಗ್ರರ ಗುರಿ
Published On :

ಬೆಂಗಳೂರು/ಚೆನ್ನೈ:  'ಎಚ್ಚರಿಕೆ...! ದಕ್ಷಿಣ ಭಾರತದಲ್ಲಿರುವ ಪ್ರಮುಖ ವಿಮಾನ ನಿಲ್ದಾಣಗಳನ್ನು ಭಯೋತ್ಪಾದಕರು ಗುರಿಯಾಗಿರಿಸಿ ದಾಳಿ ನಡೆಸಬಹುದು. ವಿಮಾನ ನಿಲ್ದಾಣಗಳ ಅಧಿಕಾರಿ ವರ್ಗ ಮತ್ತು ಪ್ರಯಾಣಿಕರು ಎಚ್ಚರದಿಂದ ಇರಬೇಕು. ದಾಳಿಗೆ ಐಎಸ್‌ಐ ಬೆಂಬಲವೂ ಇದೆ.'
- ಹೀಗೆಂದು ಸೂಚನೆ ನೀಡಿದ್ದು ವಿಮಾನ ಯಾನ ಭದ್ರತಾ ಸಂಸ್ಥೆ (ಬಿಸಿಎಸ್). ಮಂಗಳವಾರ ಸಂಸ್ಥೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರು, ಮಂಗಳೂರು, ಹೈದರಾಬಾದ್, ಕೊಚ್ಚಿ, ಚೆನ್ನೈ ಮತ್ತು ತಿರುವನಂತಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸ್ಥಳೀಯ ಪೊಲೀಸರ ಜತೆಗೆ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.
ಯಾವ ರೀತಿಯ ದಾಳಿ?
ಗುಪ್ತಚರ ಮೂಲಗಳು ನೀಡಿರುವ ಮಾಹಿತಿ ಪ್ರಕಾರ ಉಗ್ರಗಾಮಿಗಳು ಕಾರ್ ಬಾಂಬ್ ದಾಳಿ, ಆತ್ಮಹತ್ಯಾ ದಾಳಿ ಎಸಗಬಹುದು.
ಗರಿಷ್ಠ ಭದ್ರತೆ
ಬಿಸಿಎಸ್ ಪತ್ರದ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಪ್ರಮುಖ ವಿಮಾನ ನಿಲ್ದಾಣಗಳೂ ಸೇರಿದಂತೆ ದೇಶದ ಪ್ರಮುಖ 59 ವಿಮಾನ ನಿಲ್ದಾಣಗಳಲ್ಲಿ ಕೇಂದ್ರೀಯ ಕೈಗಾರಿಕಾ ಪಡೆ (ಸಿಐಎಸ್‌ಎಫ್) ಸಿಬ್ಬಂದಿಯನ್ನು ರಕ್ಷಣೆಗಾಗಿ ನಿಯೋಜಿಸಲಾಗಿದೆ. ಪ್ರಯಾಣಿಕರು ಮತ್ತು ಅವರ ಜತೆಗೆ ಇರುವವರ ಮೇಲೂ ಕಣ್ಗಾವಲು ಇಡಲಾಗಿದೆ.
ಗೊತ್ತಾದದ್ದು ಹೇಗೆ?
ಚೆನ್ನೈ ಪೊಲೀಸರಿಂದ ಬಂಧಿತಶ್ರೀಲಂಕಾ ನಾಗರಿಕನ ವಿಚಾರಣೆ ವೇಳೆ ಈ ಮಾಹಿತಿ ಬಹಿರಂಗವಾಗಿದೆ. ಪಾಕಿಸ್ತಾನದ ಐಎಸ್‌ಐ ಈ ದಾಳಿಗೆ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದು ಆತ ತಿಳಿಸಿದ್ದಾನೆ. ಪ್ರಮುಖ ಸಾರ್ವಜನಿಕ ಸ್ಥಳಗಳು, ಪ್ರಮುಖ ಸಂಸ್ಥೆಗಳ ಮೇಲೂ ದಾಳಿ ಸಂಚು ನಡೆದಿದೆ ಎಂದು ಆತ ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾನೆ. ಗುಪ್ತಚರ ಸಂಸ್ಥೆ ಅಧಿಕಾರಿಗಳ ಪ್ರಕಾರ ಪಾಕಿಸ್ತಾನದ ಐಎಸ್‌ಐ ಬೆಂಬಲಿತ ಉಗ್ರರು ದಕ್ಷಿಣ ಭಾರತದ ಪ್ರಮುಖ ನಗರಗಳಿಗೆ ನುಸುಳಲು ಯತ್ನಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.