ಸರ್ಕಾರಿ ಶಾಲೆಗಳಿಗೆ ಶೂಲ
ಕನ್ನಡಪ್ರಭ ವಾರ್ತೆ , ಬೆಂಗಳೂರು , ಮೇ 6
ಕಲಿಕಾ ಮಾಧ್ಯಮ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪು ರಾಜ್ಯದ ಸರ್ಕಾರಿ ಶಾಲೆಗಳ ಮರಣ ಶಾಸನವಾಗುವ ಸಾಧ್ಯತೆಯಿದೆ.
ರಾಜ್ಯದಲ್ಲಿರುವ 77 ಸಾವಿರಕ್ಕೂ ಅಧಿಕ ಶಾಲೆಗಳಲ್ಲಿ ಖಾಸಗಿ ಶಾಲೆಗಳಿರುವುದು 17,321. ಇಲ್ಲಿ ಓದುತ್ತಿರುವ ಮಕ್ಕಳ ಸಂಖ್ಯೆ ಸುಮಾರು 33 ಲಕ್ಷ. ಇವರಲ್ಲಿ ಇಂಗ್ಲಿಷ್ ಮಾಧ್ಯಮ ಮಕ್ಕಳ ಸಂಖ್ಯೆ 21 ಲಕ್ಷ. ಕನ್ನಡ - ಆಂಗ್ಲ ಮಾಧ್ಯಮ ಹೊರತು ಇತರೆ ಮಾಧ್ಯಮಗಳಲ್ಲಿ ಸುಮಾರು 6.82 ಲಕ್ಷ ವಿದ್ಯಾರ್ಥಿಗಳು ಓದುತ್ತಿದ್ದಾರೆ.
ರಾಜ್ಯ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರವೇ ಪ್ರತಿ ವರ್ಷ ರಾಜ್ಯದಲ್ಲಿ ಒಂದು ಸಾವಿರಕ್ಕೂ ಅಧಿಕ ಖಾಸಗಿ ಶಾಲೆಗಳು ತಲೆ ಎತ್ತುತ್ತಿವೆ. ಪೂರಕವಾಗಿ ಶೇ.2ರಿಂದ 3ರಷ್ಟು ವಿದ್ಯಾರ್ಥಿಗಳು ಇಂಗ್ಲಿಷ್ ಮಾಧ್ಯಮದತ್ತ ಪ್ರಾಥಮಿಕ ಶಿಕ್ಷಣದಿಂದಲೇ ವಾಲುತ್ತಿದ್ದಾರೆ.
ಶೇ.13ರಷ್ಟು ಆಂಗ್ಲ ಮಾಧ್ಯಮ ಶಾಲೆಗಳಿರುವ ಕರ್ನಾಟಕದದಲ್ಲಿ ಶೇ.21ರಷ್ಟು ವಿದ್ಯಾರ್ಥಿಗಳು ಆಂಗ್ಲ ಮಾಧ್ಯಮದಲ್ಲಿ ಕಲಿಯುತ್ತಿದ್ದಾರೆ. ವಿಪರ್ಯಾಸವೆಂದರೆ ಶೇ.77ರಷ್ಟಿರುವ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವವರ ಪ್ರಮಾಣ ಶೇ.50 ಮಾತ್ರ. ಈಗಾಗಲೇ ಖಾಸಗಿ ಶಾಲೆ ಹಾಗೂ ಆಂಗ್ಲ ಮಾಧ್ಯಮ ಪ್ರಭಾವದಿಂದ ಸರ್ಕಾರಿ ಶಾಲೆಗಳು ಇಲ್ಲವಾಗಿವೆ. ಕಳೆದ ಎರಡು ವರ್ಷಗಳಲ್ಲಿ ಸುಮಾರು 2 ಸಾವಿರ ಸರ್ಕಾರಿ ಶಾಲೆ ಮುಚ್ಚಿದ್ದರೆ, ಅದೇ ಪ್ರಮಾಣದಲ್ಲಿ ಖಾಸಗಿ ಶಾಲೆಗಳು ತೆರೆದಿರುವುದು ಸರ್ಕಾರದ ಆಡಳಿತ ವೈಖರಿಗೆ ಹಿಡಿದ ಕನ್ನಡಿ.
ಸುಪ್ರೀಂ ಕೋರ್ಟ್ ತೀರ್ಪಿನ ಪರಿಣಾಮ ಇನ್ನಷ್ಟು ಇಂಗ್ಲಿಷ್ ಮಾಧ್ಯಮ ಶಾಲೆಗಳು ಪ್ರಾರಂಭವಾಗಲಿವೆ. ರಾಜ್ಯದಲ್ಲಿ ಖಾಸಗಿ ಶಾಲೆಗಳ ಸಂಖ್ಯೆ 17 ಸಾವಿರಕ್ಕೂ ಹೆಚ್ಚಿದೆ. ಆದರೆ ಅಧಿಕೃತವಾಗಿ ಇಂಗ್ಲಿಷ್ ಮಾಧ್ಯಮದ ಖಾಸಗಿ ಶಾಲೆಯಿರುವುದು 10 ಸಾವಿರ ಮಾತ್ರ. ಸುಮಾರು 6 ಸಾವಿರ ಶಾಲೆಗಳು ಅನಧಿಕೃತವಾಗಿ ಆಂಗ್ಲ ಮಾಧ್ಯಮ ಶಾಲೆ ನಡೆಸುತ್ತಿವೆ. ಸರ್ಕಾರದ ಕೆಲ ನಿಯಮಗಳು ಅಂತಹ ಶಾಲೆಗಳನ್ನು ಆಂಗ್ಲ ಮಾಧ್ಯಮ
ಮಾನ್ಯತೆಯಿಂದ ದೂರ ಮಾಡಿದ್ದವು. ಈಗ ಈ ಶಾಲೆಗಳಿಗೆ ಆಂಗ್ಲ ಮಾಧ್ಯಮ ಮಾನ್ಯತೆ ನೀಡುವುದು ಅನಿವಾರ್ಯವಾಗುತ್ತದೆ. ಇದಲ್ಲದೇ ಒಂದನೇ ತರಗತಿ ಅಥವಾ ಪೂರ್ವ ಪ್ರಾಥಮಿಕ ತರಗತಿಗಳಿಂದಲೆ ಇನ್ನು ರಾಜಾರೋಷವಾಗಿ ಖಾಸಗಿ ಶಾಲೆಗಳು ಆಂಗ್ಲ ಮಾಧ್ಯಮದಲ್ಲಿ ಬೋಧನೆ ಆರಂಭಿಸುತ್ತವೆ.
ರಾಜ್ಯದಲ್ಲಿ ಭಾಷಾ ಮಾಧ್ಯಮ - ವಿದ್ಯಾರ್ಥಿಗಳ ವಿವರ(2012-13ನೇ ಸಾಲಿನ ಡೈಸ್ ಮಾಹಿತಿ ಪ್ರಕಾರ)
ಕನ್ನಡ 73,75,695
ಇಂಗ್ಲಿಷ್ 20,03,829
ಹಿಂದಿ 10,000
ತೆಲುಗು 7,088
ತಮಿಳು 12,269
ಮರಾಠಿ 1,52,091
ಉರ್ದು 5,00,683
ಸರ್ಕಾರಿ ಶಾಲೆಯಲ್ಲಿ
52,30,087
ಖಾಸಗಿ ಶಾಲೆಯಲ್ಲಿ
32,40,004
ಅನುದಾನಿತ ಶಾಲೆಗಳಲ್ಲಿ
15,36,306
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

