ಹೊಸತಾಗಿ ಎಲೆಕ್ಷನ್ ಆಗ್ಲಿ
ನವದೆಹಲಿ: ದೆಹಲಿಯ ಏಳೂ ಕ್ಷೇತ್ರಗಳಲ್ಲಿ ಗೆದ್ದಿರುವ ಬಿಜೆಪಿ, ಅದೇ ಅಲೆಯಲ್ಲಿ ವಿಧಾನಸಭೆ ಚುನಾವಣೆ ನಡೆಸಬೇಕು ಎಂಬ ಒತ್ತಾಯವನ್ನು ಆರಂಭಿಸಿದೆ. ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಕಾಂಗ್ರೆಸ್ ನೆರವಿನೊಂದಿಗೆ ಸರ್ಕಾರ ರಚಿಸುವ ಯತ್ನ ಆರಂಭಿಸಿದೆ ಎಂಬ ವದಂತಿಗಳ ಬೆನ್ನಲ್ಲೇ ಬಿಜೆಪಿ ಈ ಬೇಡಿಕೆ ಮುಂದಿಟ್ಟಿದೆ. ಆದರೆ ಯಾವುದೇ ಕಾರಣಕ್ಕೂ ಆಪ್ಗೆ ಬೆಂಬಲ ನೀಡುವುದಿಲ್ಲ ಎಂದು ಕಾಂಗ್ರೆಸ್ ತನ್ನ ನಿಲುವು ತಿಳಿಸಿದೆ. ಬದಲಾಗಿ ಚುನಾವಣೆಗೇ ಸಿದ್ಧವಿರುವುದಾಗಿ ತಿಳಿಸಿದೆ.
ದಿಲ್ಲಿಗೆ ಚುನಾವಣೆಯಾಗಲಿ: ಚಾಂದ್ನಿ ಚೌಕ್ ಕ್ಷೇತ್ರದ ಸಂಸದ ಡಾ.ಹರ್ಷವರ್ಧನ್ ದೆಹಲಿಯಲ್ಲಿ ಹೊಸದಾಗಿ ಚುನಾವಣೆಯಾಗಬೇಕೆಂದು ಒತ್ತಾಯಿಸಿದ್ದಾರೆ. ಹಾಲಿ ಇರುವ ಸಂಖ್ಯಾ ಬಲದಲ್ಲಿ ಬಿಜೆಪಿ ಕಸರತ್ತು ಮೂಲಕ ಸರ್ಕಾರ ರಚಿಸಲು ಮುಂದಾಗುವುದಿಲ್ಲ ಎಂದಿದ್ದಾರೆ ಅವರು. ಏನಿದ್ದರೂ ಹೊಸತಾಗಿ ಚುನಾವಣೆಯೇ ನಮ್ಮ ಆದ್ಯತೆ ಎಂದಿದ್ದಾರೆ. ದೆಹಲಿಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ.
ಇಲ್ಲಪ್ಪಾ ಬೆಂಬಲ ಇಲ್ಲ: ಸರ್ಕಾರ ರಚನೆಗೆ ಆಪ್ಗೆ ಬೆಂಬಲ ನೀಡುವುದಿಲ್ಲ. ಅದರ ಬದಲಾಗಿ ಹೊಸತಾಗಿ ಚುನಾವಣೆ ನಡೆಯಲಿ. ಅದಕ್ಕೆ ಪಕ್ಷ ಸಿದ್ಧವಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಆಪ್ ಪ್ರಯತ್ನದ ಬಗ್ಗೆ ಪ್ರತಿಕ್ರಿಯೆ ನೀಡಿರುವ ದೆಹಲಿ ಕಾಂಗ್ರೆಸ್ ವಕ್ತಾರ ಮುಕೇಶ್ ಶರ್ಮಾ, 'ಕೇಜ್ರಿವಾಲ್ ನೇತೃತ್ವದ ಪಕ್ಷಕ್ಕೆ ಮತ್ತೆ ಸರ್ಕಾರ ರಚಿಸುವ ಯಾವುದೇ ನೈತಿಕ ಹಕ್ಕು ಇಲ್ಲ' ಎಂದಿದ್ದಾರೆ. ಕೇಜ್ರಿವಾಲ್ ದೆಹಲಿ ಜನತೆಗೆ ಮೋಸ ಮಾಡಿದ್ದಾರೆ. ಅಂಥ ವ್ಯಕ್ತಿಗೆ ಮತ್ತೆ ಪಕ್ಷ ಬೆಂಬಲ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

