ಪ್ರಧಾನ ಸುದ್ದಿ

4 ವರ್ಷಗಳಲ್ಲಿ ದೇಶದ ಅಭಿವೃದ್ಧಿ ಹೊಂದಿದ ರಾಜ್ಯ: ಸಿದ್ದರಾಮಯ್ಯ

4 ವರ್ಷಗಳಲ್ಲಿ ದೇಶದ ಅಭಿವೃದ್ಧಿ ಹೊಂದಿದ ರಾಜ್ಯ: ಸಿದ್ದರಾಮಯ್ಯ
Published On :

ಬೆಂಗಳೂರು: ಕರ್ನಾಟಕವನ್ನು ಮುಂದಿನ ನಾಲ್ಕು ವರ್ಷಗಳ ಅವಧಿಯಲ್ಲಿ ದೇಶದ ಅಭಿವೃದ್ಧಿ ಹೊಂದಿದ ಐದು ರಾಜ್ಯಗಳ ಸಾಲಿನಲ್ಲಿ ನಿಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಪಥ ಮಾಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇದುವರೆಗಿನ ಸರ್ಕಾರದ ಸಾಧನೆಯ ವಿವರವನ್ನೊಳಗೊಂಡ 'ನುಡಿದಂತೆ ನಡೆದಿದ್ದೇನೆ' ಕಿರು ಹೊತ್ತಗೆ ಬಿಡುಗಡೆಗೊಳಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.
ರಾಜ್ಯವನ್ನು ಹಸಿವು ಮುಕ್ತ, ಗುಡಿಸಲು ಮುಕ್ತಗೊಳಿಸುವುದರ ಜತೆಗೆ ವಿದ್ಯುಚ್ಚಕ್ತಿ, ನೀರಾವರಿ, ಕೃಷಿ ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ಆದ್ಯತೆ ಆಧಾರದ ಮೇಲೆ ಬದಲಾವಣೆ ತರಲಾಗುವುದು. ತಲಾ ಆದಾಯ ಹೆಚ್ಚಳಕ್ಕೆ ಒತ್ತು ನೀಡಲಾಗುವುದು. ಎಲ್ಲಕ್ಕಿಂತ ಹೆಚ್ಚಾಗಿ ದೇಶದ ಅಭಿವೃದ್ಧಿ ಹೊಂದಿದ ಐದು ರಾಜ್ಯಗಳ ಪೈಕಿ ಕರ್ನಾಟಕವೂ ಒಂದಾಗಿರುವ ರೀತಿಯಲ್ಲಿ ಮುಂದಿನ ನಾಲ್ಕು ವರ್ಷದಲ್ಲಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಶೇ.97ರಷ್ಟು ತೆರಿಗೆ ಸಂಗ್ರಹ: ತೆರಿಗೆ ಸಂಗ್ರಹಕ್ಕೆ ಆದ್ಯತೆ ನೀಡಿಲ್ಲ ಎಂದು ಪ್ರತಿಪಕ್ಷ ಆರೋಪಿಸಿದ್ದಾರೆ. ಹಾಗಿದ್ದರೆ, ಅನ್ನಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿಯಂಥ ಮಹತ್ವದ ಯೋಜನೆಗಳನ್ನು ಜಾರಿಗೆ ತರಲು ಸಾಧ್ಯವಾಗುತ್ತಿತ್ತೇ?
62464 ಕೋಟಿ ತೆರಿಗೆ ಸಂಗ್ರಹದ ಗುರಿ ಹೊಂದಲಾಗಿತ್ತು. ಆದರೆ ರು. 60652 ಕೋಟಿ ಸಂಗ್ರಹಿಸಿದ್ದೇವೆ. 1800 ಕೋಟಿ ತೆರಿಗೆ ಸಂಗ್ರಹದಲ್ಲಿ ಕೊರತೆಯಾಗಿದೆ. ರಾಜ್ಯ ತೆರಿಗೆ ಸಂಗ್ರಹದಲ್ಲಿ ಶೇ.97ರಷ್ಟು ಯಶಸ್ಸು ಸಾಧಿಸಿದೆ. ಮೋಟಾರು ವಾಹನ, ಮುದ್ರಾಂಕ ನೋಂದಣಿ ಶುಲ್ಕದಲ್ಲಿ ಮಾತ್ರ ಹಿನ್ನಡೆಯಾಗಿದೆ ಎಂದು ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಸ್ಥೂಲ ವಿವರಣೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.