ಬೆಟ್ಟಿಂಗ್ ಭೂತಕ್ಕೆ ವಿದ್ಯಾರ್ಥಿಗಳು ಬಲಿ
ಹುಬ್ಬಳ್ಳಿ: ಐಪಿಎಲ್ ಬೆಟ್ಟಿಂಗ್ ದಂಧೆ ಹುಬ್ಬಳ್ಳಿಯ ಹೈಸ್ಕೂಲ್ ವಿದ್ಯಾರ್ಥಿಗಳಿಬ್ಬರ ಬದುಕನ್ನೇ ಬಲಿ ತೆಗೆದುಕೊಂಡಿದೆ. ಭವಾನಿ ನಗರ ಎಸ್‌ಬಿಐ ಕಾಲೋನಿಯ ನಿವಾಸಿ 9ನೇ ತರಗತಿಯ ವಿದ್ಯಾರ್ಥಿ ನೇಹಾಲ ಅಶ್ವಿನ್ ಮಿಠಾರೆ (14) ಹಾಗೂ 8ನೇ ತರಗತಿಯ ವಿದ್ಯಾರ್ಥಿ ಸ್ವರೂಪ ಪ್ರಕಾಶ್ ರೋಖಡೆ (15)ಬೆಟ್ಟಿಂಗ್ ಹಣ ಹಿಂತಿರುಗಿಸಲು ಸಾಧ್ಯವಾಗದೆ ಕೊನೆಗೆ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಊಟ ಮುಗಿಸಿಕೊಂಡು ಹೊರನಡೆದ ಈ ಇಬ್ಬರು ಬೆಳಗ್ಗೆ ಹುಬ್ಬಳ್ಳಿ ಅಶೋಕ ನಗರ ರೇಲ್ವೆ ಟ್ರ್ಯಾಕ್ ಬಳಿ ಶವವಾಗಿ ಪತ್ತೆಯಾಗಿದ್ದಾರೆ.
ಬೆಟ್ಟಿಂಗ್: ಮೂಲಗಳ ಪ್ರಕಾರ ಮಕ್ಕಳಿಬ್ಬರೂ ಐಪಿಎಲ್ ಬೆಟ್ಟಿಂಗ್ ವ್ಯವಹಾರದಲ್ಲಿ ಬಿದ್ದಿದ್ದರು. ಬೆಟ್ಟಿಂಗ್ ಕುಳಗಳು ಹಣಕ್ಕಾಗಿ ಮಕ್ಕಳನ್ನು ಪೀಡಿಸಿದ್ದರಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಊಹಿಸಲಾಗಿದೆ. ರೇಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಊಟ ಮಾಡಿ ಹೊರಹೋದವರು ಹೆಣವಾದರು: ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
ನಡೆದದ್ದು ಹೀಗೆ
ನೇಹಾಲ ಹಾಗೂ ಸ್ವರೂಪ ಭಾನುವಾರ ರಾತ್ರಿ ಊಟ ಮುಗಿಸಿ ಸುತ್ತಾಡಿಕೊಂಡು ಬರುವುದಾಗಿ ಮನೆಯಿಂದ ಬೈಕ್ ತೆಗೆದುಕೊಂಡು ತೆರಳಿದ್ದಾರೆ. ಮಕ್ಕಳು ತಡರಾತ್ರಿವರೆಗೂ ಮನೆಗೆ ಮರಳದಿದ್ದಾಗ ಭಯಭೀತರಾದ ಪಾಲಕರು ಹುಡುಕಾಟ ನಡೆಸಿದ್ದಾರೆ. ಮಕ್ಕಳ ಸುಳಿವು ಸಿಗದಿದ್ದಾಗ ಅಶೋಕ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಮಕ್ಕಳಿಬ್ಬರೂ ತೆಗೆದುಕೊಂಡು ಹೋಗಿದ್ದ ಬೈಕ್ ಅಶೋಕ ನಗರ ರೇಲ್ವೆ ಹಳಿಯ ಪಕ್ಕ ಪತ್ತೆಯಾಗಿದೆ. ಸ್ಥಳ ಪರಿಶೀಲಿಸಿದಾಗ ಇಬ್ಬರೂ ಮಕ್ಕಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ಖಚಿತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

