ರಾಜ್ಯದಲ್ಲೂ ಮುಸುಕಿನ ಗುದ್ದಾಟ
ಮಂಡ್ಯ/ಹುಬ್ಬಳ್ಳಿ/ಮೈಸೂರು: ಆಂತರಿಕ ಕಚ್ಚಾಟದಿಂದಾಗಿ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲುಂಡಿದ್ದ ರಾಜ್ಯ ಕಾಂಗ್ರೆಸ್ನಲ್ಲೀಗ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಮುಸುಕಿನ ಗುದ್ದಾಟ ಶುರುವಾಗಿದೆ.
ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆನ್ನುವ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಕೃಷಿ ಸಚಿವ ಕೃಷ್ಣಬೈರೇಗೌಡ ಹೊಸ ಬಾಂಬ್ ಸಿಡಿಸಿದ್ದಾರೆ. ಪರಮೇಶ್ವರ್ ಉಪ ಮುಖ್ಯಮಂತ್ರಿ ಆಗುತ್ತಾರೋ, ಇಲ್ವೋ ಗೊತ್ತಿಲ್ಲ. ಆದರೆ, ಸಚಿವರಾಗುವುದಂತೂ ಖಚಿತ ಎಂದಿದ್ದಾರೆ. ಜತೆಗೆ, ಸಚಿವ ಸಂಪುಟ ವಿಸ್ತರಣೆ ನಡೆಯಲ್ಲ, ಸಣ್ಣಪುಟ್ಟ ಬದಲಾವಣೆಗಳಷ್ಟೇ ಆಗುತ್ತವೆ ಎಂದು ಹೇಳಿ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಿಸಿದ್ದಾರೆ.
ಈ ನಡುವೆ, ಮಂಡ್ಯದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತ ಮಾಜಿ ಸಂಸದೆ ರಮ್ಯಾ ಬೆಂಬಲಿಗರಿಂದಲೂ ಹೆಚ್ಚುತ್ತಿರುವ ಒತ್ತಡಕ್ಕೆ ವಸತಿ ಸಚಿವ ಅಂಬರೀಷ್ ಟಾಂಗ್ ನೀಡಿದ್ದಾರೆ. ರಮ್ಯಾ ಸೇರಿ ಮಂಡ್ಯದ ಯಾರಿಗೇ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಸಿಕ್ಕರೂ ನನಗೆ ಖುಷಿ. ಅದಕ್ಕೂ ಮೊದಲು ರಮ್ಯಾ ಎಂಎಲ್ಸಿ ಆಗಬೇಕು. ಆದರೆ, ಇದೆಲ್ಲ ನನ್ನ ಕೈಯಲ್ಲಿ ಇಲ್ಲ ಎಂದಿದ್ದಾರೆ ಅಂಬರೀಷ್. ಈ ಮೂಲಕ ರಮ್ಯಾ ಸಚಿವೆ ಆಗುವುದು ಅಷ್ಟು ಸುಲಭವಲ್ಲ ಎನ್ನುವ ಸಂದೇಶವನ್ನೂ ಅಂಬರೀಷ್ ರವಾನಿಸಿದ್ದಾರೆ.
ಚುನಾವಣೆಯಲ್ಲಿ ಸೋತವರಿಗೆಲ್ಲಾ ವಿಧಾನ ಪರಿಷತ್ ಸದಸ್ಯತ್ವ ಅಥವಾ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ
- ಸಿದ್ದರಾಮಯ್ಯ ಮುಖ್ಯಮಂತ್ರಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

