ಪ್ರಧಾನ ಸುದ್ದಿ

ಸಂಜೀವ್‌ಕುಮಾರ್ ವರ್ಗ

Published On :

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ವಿರುದ್ಧವಾಗಿ ನಡೆದುಕೊಂಡ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಂಜೀವ್‌ಕುಮಾರ್ ಅವರನ್ನು ವರ್ಗಾಯಿಸಿದ್ದಾರೆ.
ಸರ್ಕಾರಿ ಅಧಿಕಾರಿಗಳ ಸೇವಾ ಮಂಡಳಿ ರಚನೆ ಸಂಬಂಧ ಸಚಿವ ಸಂಪುಟದ ನಿರ್ಧಾರದ ವಿರುದ್ಧವಾಗಿ ಹೈಕೋರ್ಟ್‌ಗೆ ಸಂಜೀವ್‌ಕುಮಾರ್ ಮಾಹಿತಿ ನೀಡಿ ಮುಖ್ಯಮಂತ್ರಿಯವರ ಕೋಪಕ್ಕೆ ಗುರಿಯಾಗಿದ್ದರು. ಸಂಜೀವ್‌ಕುಮಾರ್ ಅವರನ್ನು ಸಚಿವ ಸಂಪುಟ ಒಳಕ್ಕೆ ಬರಬೇಡ, 'ಗೆಟ್‌ಔಟ್‌' ಎಂದೂ ಸಿದ್ದರಾಮಯ್ಯ ಗದರಿದ್ದರು. ಅಲ್ಲದೆ ಅವರನ್ನು ಅಮಾನತು ಮಾಡುವಂತೆ ಮುಖ್ಯಕಾರ್ಯದರ್ಶಿಯವರಿಗೆ ಸೂಚಿಸಿದ್ದರು. ಈ ಸಂದರ್ಭದಲ್ಲಿ ಐಎಎಸ್ ಅಧಿಕಾರಿ ವರ್ಗ ಸಂಜೀವ್‌ಕುಮಾರ್ ಪರವಾಗಿ ನಿಂತಿದ್ದರಿಂದ, ಶೀತಲಸಮರ ಉಂಟಾಗಿತ್ತು. ಈ ಘಟನೆ ಮಾಸುವ ವೇಳೆಗೆ ಸಿದ್ದರಾಮಯ್ಯ ಅವರು ಸಂಜೀವ್‌ಕುಮಾರ್ ಅವರನ್ನು ವರ್ಗಾಯಿಸಿ ತಮ್ಮ ಸೇಡು ತೀರಿಸಿಕೊಂಡಿದ್ದಾರೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ(ಡಿಪಿಎಆರ್) ಪ್ರಧಾನ ಕಾರ್ಯದರ್ಶಿ ಸಂಜೀವ್‌ಕುಮಾರ್ ಅವರನ್ನು ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನಾಗಿ ವರ್ಗಾಯಿಸಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಈ ಇಲಾಖೆಯಲ್ಲಿದ್ದ ರಮಣರೆಡ್ಡಿ ಅವರನ್ನು ಡಿಪಿಎಆರ್ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾಯಿಸಲಾಗಿದೆ. ಇದಲ್ಲದೆ, ಯಾದಗಿರಿ ಜಿಲ್ಲಾಧಿಕಾರಿಯಾಗಿದ್ದ ಎಫ್.ಆರ್. ಜಮಾದಾರ್ ಅವರನ್ನು ರಾಮನಗರ ಜಿಲ್ಲಾಧಿಕಾರಿ ಹುದ್ದೆಗೆ ವರ್ಗಾಯಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.